ಮಡಿಕೇರಿ ಜು.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಜು.6 ರಂದು ಬೆಳಗ್ಗೆ 10.30 ಗಂಟೆಗೆ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಂ ಅವರ 39ನೇ ಪುಣ್ಯಸ್ಮರಣೆ ಕಾರ್ಯಕ್ರಮವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.











