ಮಡಿಕೇರಿ ಜು.3 NEWS DESK : ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ:ಅರ್ಧ ಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಷ್ಟಂಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ, 20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ https://sahithyaacademy.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.











