ಮಡಿಕೇರಿ ಜು.3 NEWS DESK : ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ ಯದುವೀರ್ ಖುದ್ದು ಪರಿಶೀಲನೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರೂಪ ದರ್ಶನದ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.












