ಮಡಿಕೇರಿ ಜು.3 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ)ವತಿಯಿಂದ 2025-26ನೇ ಸಾಲಿಗೆ ಅನ್ವಯವಾಗುವಂತೆ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶಿಕ್ಷಣಕ್ಕಾಗಿ ನೀಡಲಾಗುವ ಆರ್ಥಿಕ ನೆರವನ್ನು ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಗಳವರಗೆ ವಿದ್ಯಾಭ್ಯಾಸ ಮಾಡುತ್ತಿರುವ ಪತ್ರಕರ್ತರ ಮಕ್ಕಳು ಪಡೆಯಲು ಅರ್ಹರಾಗಿರುತ್ತಾರೆ. ನೆರವು ಪಡೆಯಲು ಇಚ್ಛಿಸುವವರು ಅಂಕಪಟ್ಟಿ, ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿಯೊಂದಿಗೆ ಅರ್ಜಿಯನ್ನು ದಿನಾಂಕ 12-07-2025ರ ಒಳಗಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿಗಳನ್ನು ‘ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ), ಪತ್ರಿಕಾ ಭವನ, ಕೈಗಾರಿಕಾ ಬಡಾವಣೆ, ಮಡಿಕೇರಿ-571201’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.













