ಗೋಣಿಕೊಪ್ಪ ಜು.4 NEWS DESK : ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಲಯನ್ಸ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಪಿ.ಎನ್.ಪೆಮ್ಮಯ್ಯ ಮತ್ತು ಉಪಾಧ್ಯಕ್ಷ ಪಿ.ಧನು ಉತ್ತಯ್ಯ ಉಪಸ್ಥಿತಿಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್‍ಗಳನ್ನು ಲಯನ್ಸ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ವಿತರಿಸಿದರು. ಲಯನ್ಸ್ ಕಾಲೇಜಿನ ಪ್ರಾಂಶುಪಾಲರು ಸಿ.ಬಿ.ಲತಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. “ಶಿಸ್ತು ಮತ್ತು ಆತ್ಮವಿಶ್ವಾಸ ಉಳ್ಳವರಾಗಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಾನ ಸಿ.ಎಸ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ತಂಗಮ್ಮ ಮತ್ತು ವಿದ್ಯಾ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು. ಪ್ರಾರ್ಥನೆಯನ್ನು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ನಿರೂಪಣೆಯನ್ನು ಪ್ರೌಢಶಾಲೆಯ ಆರಾಧನಾ ಮತ್ತು ಅತಿಥಿಗಳ ಸ್ವಾಗತ ಮತ್ತು ವಂದನಾರ್ಪಣೆಯನ್ನು ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದಾನಿಕ ದೇಚಮ್ಮ ಮತ್ತು ಭುವನ ಪೂವಯ್ಯ ನೆರವೇರಿಸಿದರು.












