ಬೆಂಗಳೂರು ಜು.4 NEWS DESK : ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಚರ್ಚೆ ನಡೆಸಿದರು. ನಗರಾಭಿವೃದ್ಧಿ ಹಾಗೂ ನಗರಾ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸಭೆಯಲ್ಲಿ ಉಪಸ್ಥಿತರಿದ್ದರು.











