ಸೋಮವಾರಪೇಟೆ ಜು.4 NEWS DESK : ಮಾಜಿ ಸಚಿವ ಅಪ್ಪಚ್ಚು ರಂಜನ್ ಜನ್ಮದಿನದ ಹಿನ್ನಲೆ ಇಂದು ಹಲವು ಮಠಾಧೀಶರು ಹಾಗೂ ಗಣ್ಯರು ಶುಭಕೋರಿದರು. 66 ಸಂವತ್ಸರ ಪೂರೈಸಿದ ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ನಿವಾಸಕ್ಕೆ ಹಲವು ಗಣ್ಯರು ತೆರಳಿ ಜನ್ಮದಿನದ ಶುಭಹಾರೈಸಿದರು. ಈ ಸಂದರ್ಭ ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮುಳ್ಳುರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಪಟ್ಟಣ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿಗಳು ಆಶೀರ್ವದಿಸಿ ಶುಭಕೋರಿದರು.












