ಮಡಿಕೇರಿ ಜು.4 NEWS DESK : ಜಿಲ್ಲಾ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಪರಿಶೀಲಿಸಿದರು. ಭವನದ ಸಭಾಂಗಣದಲ್ಲಿ ಚೇರ್ ಮತ್ತು ಬೆಳಕು ವ್ಯವಸ್ಥೆ, ವೇದಿಕೆ ನಿರ್ಮಾಣ, ಧ್ವನಿ ನಿಯಂತ್ರಣ ಫಲಕ ಅಳವಡಿಕೆ, ವಿದ್ಯುತ್ ಕಾಮಗಾರಿ, ಮತ್ತಿತರ ಕೆಲಸಗಳು ಆಗಬೇಕಿದ್ದು, ತ್ವರಿತವಾಗಿ ಪೂರ್ಣಗೊಳಿಸುವಂತೆ ಎಂಜಿನಿರ್‌ಗೆ ನಿರ್ದೇಶನ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಸದಸ್ಯರಾದ ಪುತ್ತರೀರ ಪಪ್ಪು ತಿಮ್ಮಯ್ಯ, ಕಂಬೇಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಕೊಂಡಿಜಮ್ಮನ ಎಂ.ಬಾಲಕೃಷ್ಣ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಪೊನ್ನಿರ ಯು.ಗಗನ್, ನಾಯಕಂಡ ಬೇಬಿ ಚಿನ್ನಪ್ಪ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ, ನಾಪಂಡ ಸಿ.ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಇದ್ದರು. ಬಳಿಕ ಕುಶಾಲನಗರಕ್ಕೆ ತೆರಳಿ ಕುಶಾಲನಗರ ಕಲಾಭವನ ಕಾಮಗಾರಿ ವೀಕ್ಷಿಸಿ ಮಾಹಿತಿ ಪಡೆದರು.










