Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*178 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ವಿತರಣೆ : ಅರ್ಹರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ : ಶಾಸಕ ಡಾ.ಮಂತರ್ ಗೌಡ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*178 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ವಿತರಣೆ : ಅರ್ಹರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ : ಶಾಸಕ ಡಾ.ಮಂತರ್ ಗೌಡ ಸಲಹೆ*

ಜುಲೈ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 8 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 178 ಮನೆಗಳ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿದರು. ಗಾಳಿಬೀಡು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದ ಶಾಸಕರು, ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗುತ್ತಿದ್ದು, ಮಳೆಗಾಲ ನಂತರ ಮನೆ ನಿರ್ಮಾಣಕ್ಕೆ ಮುಂದಾಗಬಹುದಾಗಿದೆ ಎಂದು ಸಲಹೆ ನೀಡಿದರು. ಸರ್ಕಾರದ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ಇರುವವರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಿದ್ದು, ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಕೋರಿದರು. ಸರ್ಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಕಾರ್ಯಕ್ರಮಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವತ್ತ ಮುಂದಾಗಬೇಕು ಎಂದು ಡಾ.ಮಂತರ್ ಗೌಡ ಅವರು ತಿಳಿಸಿದರು. ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು ಎಲ್ಲಾ ಜಾಗವನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರುತ್ತದೆ ಎಂದು ಇಲ್ಲಿನ ಸ್ಥಳೀಯರಿಗೆ ತೊಂದರೆ ನೀಡುತ್ತೀರುವ ಬಗ್ಗೆ ಮಾಹಿತಿ ಇದೆ. ಈ ರೀತಿ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಕಿರಿಕಿರಿ ಕೊಡಬಾರದು. ಸ್ಥಳೀಯರು ಬದುಕಬೇಕು. ಅರಣ್ಯವೂ ಸಹ ಉಳಿಯಬೇಕು ಎಂದು ಸಲಹೆ ನೀಡಿದರು. ಮಾಂದಲ್‍ಪಟ್ಟಿ ರಸ್ತೆಯನ್ನು ಸರಿಪಡಿಸುವಂತೆ ಲೋಕೋಪಯೋಗಿ ಎಂಜಿನಿಯರ್‍ಗೆ ಶಾಸಕರು ಸೂಚಿಸಿದರು. ಕಾಲೂರು ಬಳಿ ನಿರ್ಮಾಣವಾಗುತ್ತಿರುವ ಸೇತುವೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಪಂಚಾಯತ್ ರಾಜ್ ಎಂಜಿನಿಯರ್‍ಗೆ ಡಾ.ಮಂತರ್ ಗೌಡ ಸೂಚಿಸಿದರು. ಅರಣ್ಯ ಮತ್ತು ಕಂದಾಯಕ್ಕೆ ಸಂಬಂಧಿಸಿದಂತೆ ಆಗಬೇಕಿರುವ ಕೆಲಸಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಅರಣ್ಯ ಇಲಾಖೆಯವರು ಸಾರ್ವಜನಿಕರಿಗೆ ಸ್ಪಂದಿಸುವಂತಾಗಬೇಕು. ಜೊತೆಗೆ ಕಂದಾಯ ಇಲಾಖೆಯವರ ಸಹಕಾರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಮನ್ವಯತೆಯಿಂದ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು. ತಾ.ಪಂ.ಇಒ ಶೇಖರ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 8 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸುತ್ತಿರುವುದು ವಿಶೇಷವಾಗಿದೆ. ಶಾಸಕರ ವಿಶೇಷ ಕಾಳಜಿಯಿಂದ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸಲಾಗುತ್ತಿದೆ ಎಂದರು. ಗಾಳಿಬೀಡು ಸೇರಿದಂತೆ ಇಲ್ಲಿನ ವಿವಿಧ ಪ್ರದೇಶಗಳಲ್ಲಿ ವನ್ಯಪ್ರಾಣಿಗಳ ಹಾವಳಿ ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು. ಗಾಳಿಬೀಡು ಗ್ರಾ.ಪಂ.ಅಧ್ಯಕ್ಷರಾದ ಪುಷ್ಪಾವತಿ, ಉಪಾಧ್ಯಕ್ಷರಾದ ರಾಜಾಶೇಖರ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ, ಲೋಕೋಪಯೋಗಿ ಎಇಇ ಗಿರೀಶ್, ಪಂಚಾಯತ್ ರಾಜ್ ಇಲಾಖೆಯ ಎಇ ರಘು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.