
ಮಡಿಕೇರಿ NEWS DESK ಜು.6 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ದಸರಾ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿಯಾಗಿ ಮುದ್ದುರಾಜು ಬಿ.ಎನ್ ಹಾಗೂ ಖಜಾಂಚಿಯಾಗಿ ಪ್ರದೀಪ್ ಆಯ್ಕೆಯಾಗಿದ್ದಾರೆ.
ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಆವರಣದಲ್ಲಿ ಇಂದು ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ಬಿ.ಕೆ.ಜಗದೀಶ್ ಅವರು ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿ 50ನೇ ವರ್ಷದ ದಸರಾ ಆಚರಣೆಯ ಸಂಭ್ರಮದಲ್ಲಿದ್ದು, ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದೆಂದು ತಿಳಿಸಿದರು.








