Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಸರ್ಕಾರದ 2 ವರ್ಷಗಳ ಸಾಧನೆ ಹಾಗೂ ಯೋಜನೆಗಳ ಕುರಿತ ಮಾಹಿತಿ ವಸ್ತು ಪ್ರದರ್ಶನಕ್ಕೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಸರ್ಕಾರದ 2 ವರ್ಷಗಳ ಸಾಧನೆ ಹಾಗೂ ಯೋಜನೆಗಳ ಕುರಿತ ಮಾಹಿತಿ ವಸ್ತು ಪ್ರದರ್ಶನಕ್ಕೆ ಚಾಲನೆ*

ಜುಲೈ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.7 NEWS DESK  : ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆ ಬಿಂಬಿಸುವ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನವಕ್ಕೆ ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತೀರ ಧರ್ಮಜ ಉತ್ತಪ್ಪ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು. ನಗರದ ಕೆಎಸ್‍ಆರ್ ಟಿಸಿ ಬಸ್ಸು ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ “ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು. ವಸ್ತು ಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು “ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ. ಎರಡು ಸಾವಿರ ಹಣ ನೀಡುವ ಗೃಹಲಕ್ಷ್ಮಿ ಯೋಜನೆ, ಜತೆಗೆ ಅನ್ನಭಾಗ್ಯ, ಪದವಿ, ಡಿಪ್ಲೊಮಾ ಪೂರ್ಣಗೊಳಿಸಿದ ಯುವ ಜನತೆಗೆ ಉದ್ಯೋಗ ಪಡೆಯಲು ಅನುಕೂಲವಾಗಲು ಪ್ರತಿ ತಿಂಗಳು ಪದವೀಧರರಿಗೆ ರೂ.ಮೂರು ಸಾವಿರ ಹಾಗೂ ಡಿಪ್ಲೊಮೊ ಪದವಿದರರಿಗೆ ರೂ.1500 ನೀಡುವ ಯುವನಿಧಿ, ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಜನಸಾಮಾನ್ಯರ ಬದುಕಿಗೆ ಆಸರೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮ ಒಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಗಣ್ಯರು ವೀಕ್ಷಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವಚಿತ್ರಗಳನ್ನು ಒಳಗೊಂಡ ಸೆಲ್ಫಿ ಪಾಯಿಂಟ್‍ಗಳನ್ನು ವೀಕ್ಷಿಸಿ ಪ್ರಶಂಸಿದ ಗ್ಯಾರಂಟಿ ಯೋಜನೆ ಅನುಷ್ಠಾನ ಜಿಲ್ಲಾ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್ ಅವರು ಸೆಲ್ಫಿ ಪಾಯಿಂಟ್‍ಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡರು. ಬಳಿಕ ಮಾತನಾಡಿದ ತೀತೀರ ಧರ್ಮಜ ಉತ್ತಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮ ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಗ್ರಾಮೀಣ ಮಟ್ಟಕ್ಕೂ ಈ ಯೋಜನೆಯ ಮಾಹಿತಿ ದೊರೆಯುವಂತಾಗಬೇಕು ಎಂದರು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿದಂತೆ ಸರ್ಕಾರ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಕಲ್ಯಾಣ ಕಾರ್ಯಕ್ರಮವನ್ನು ಶ್ರೀ ಸಾಮಾನ್ಯರಿಗೆ ತಲುಪಿಸಲು ಶ್ರಮಿಸಿದೆ ಎಂದರು. ಸರ್ಕಾರದ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ ಚಿತ್ರಣ ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರದ ಸಾಧನೆ ಒಳಗೊಂಡ ಮಾಹಿತಿ ವಸ್ತು ಪ್ರದರ್ಶನ ಗಮನ ಸೆಳೆಯುತ್ತದೆ ಎಂದು ಧರ್ಮಜ ಉತ್ತಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಗಣ್ಯರು ಕೂಡ ಸೆಲ್ಫಿಪಾಯಿಂಟ್‍ನಲ್ಲಿ ಫೋಟೊ ತೆಗೆಯಿಸಿಕೊಂಡು ಸಂತಸ ವ್ಯಕ್ತಪಡಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ಮಾಹಿತಿ ಒಳಗೊಂಡ ವಸ್ತು ಪ್ರದರ್ಶನವನ್ನು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು, ಜುಲೈ 8 ರ ವರೆಗೆ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿಲು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾಹಿತಿ ನೀಡಿದರು. ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿದೆ. ಈ ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆ ಒಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿ ಅವರಿಂದ ಪಡೆಯುವಂತೆ ಬಿಂಬಿಸುವ ಸೆಲ್ಪಿ ತೆಗೆದುಕೊಂಡರು. ಕೆಎಸ್ ಆರ್ ಟಿಸಿ ಸಹಾಯಕ ಸಂಚಾರ ಅಧೀಕ್ಷರರಾದ ಎ.ಈರಸಪ್ಪ, ಸಂಚಾರ ನಿಯಂತ್ರಕ ಮಲ್ಲಿಕಾರ್ಜುನ, ನಾಯಕ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.