Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ತೋಟಗಾರಿಕೆ ಇಲಾಖೆಯಿಂದ ವಿವಿಧ ಕಾರ್ಯಕ್ರಮ ಅನುಷ್ಠಾನ : ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ತೋಟಗಾರಿಕೆ ಇಲಾಖೆಯಿಂದ ವಿವಿಧ ಕಾರ್ಯಕ್ರಮ ಅನುಷ್ಠಾನ : ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್*

ಜುಲೈ 7, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.7 NEWS DESK : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‍ವೈ) (ಪ್ರತಿ ಹನಿ ನೀರಿಗೆ ಹೆಚ್ಚು ಉತ್ಪಾದನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ/ ಸೂಕ್ಷ್ಮ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡುವ ಯೋಜನೆ ಇದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ಅವರು ಮಾಹಿತಿ ನೀಡಿದ್ದಾರೆ. ಅಡಿಕೆ, ತೆಂಗು, ಶುಂಠಿ, ಬಾಳೆ, ತಾಳೆ, ಕಾಳುಮೆಣಸು, ಬೆಣ್ಣೆಹಣ್ಣು, ಸಪೋಟ, ತರಕಾರಿ ಬೆಳೆಗಳು ಹಾಗೂ ಇತರೆ ತೋಟದ ಬೆಳೆಗಳಿಗೆ ಹನಿ ನೀರಾವರಿ/ ಸೂಕ್ಷ್ಮ ನೀರಾವರಿ ಪದ್ದತಿಗಳಿಗೆ ಸಹಾಯಧನ. ಪರಿಶಿಷ್ಟ ಜಾತಿ/ ಪಂಗಡ /ಇತರೆ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡುವ ಯೋಜನೆ ಇದೆ ಎಂದರು. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಬಾಳೆ, ತರಕಾರಿ, ಬೆಣ್ಣೆ ಹಣ್ಣುಗಳ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಶೇ.40ರ ಸಹಾಯಧನ ನೀಡಲಾಗುತ್ತದೆ. ಪುನಶ್ಚೇತನ ಕಾರ್ಯಕ್ರಮದಡಿ ರೈತರಿಗೆ ಉಚಿತವಾಗಿ ಕಿತ್ತಳೆ, ಕಾಳುಮೆಣಸು ಸಸಿಗಳು ಹಾಗೂ ಜೈವಿಕ ಗೊಬ್ಬರ ವಿತರಿಸಲಾಗುತ್ತದೆ. ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಹಸಿರು ಮನೆ/ಪಾಲಿ ಮನೆ/ನೆರಳು ಪರದೆ ಮನೆಗಳ ನಿರ್ಮಾಣಕ್ಕೆ ಹಾಗೂ ಪ್ಲಾಸ್ಟಿಕ್ ಹೊದಿಕೆಗೆ ಶೇ.50 ರ ಸಹಾಯಧನ. ಹಾಗೆಯೇ ನೀರು ಸಂಗ್ರಹಣಾ ಘಟಕಗಳಿಗೆ ಶೇ.50 ರ ಸಹಾಯಧನ ನೀಡಲಾಗುತ್ತದೆ ಎಂದು ಯೋಗೇಶ್ ತಿಳಿಸಿದ್ದಾರೆ. ಕೊಯ್ಲೋತ್ತರ ನಿರ್ವಹಣೆ ಕಾರ್ಯಕ್ರಮದಡಿ ಸಂಸ್ಕರಣಾ ಘಟಕಗಳು/ಪ್ಯಾಕ್ ಹೌಸ್/ಶೀತಲ ಗೃಹಗಳ ನಿರ್ಮಾಣಕ್ಕೆ ಶೇ.50 ರ ಸಹಾಯಧನ ನೀಡಲಾಗುವುದು. ಅಣಬೆ ಘಟಕ ನಿರ್ಮಿಸಲು ಶೇ.40 ರ ಸಹಾಯಧನ ನೀಡಲಾಗುವುದು ಎಂದರು. ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಡಿ (ತಾಳೆ ಬೆಳೆ ಯೋಜನೆ): “ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ” ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಶೇ.50 ರ ಸಹಾಯಧನ ನೀಡಲಾಗುತ್ತದೆ. ಮೊದಲನೇ, ಎರಡನೇ, ಮೂರನೇ ಮತ್ತು ನಾಲ್ಕನೇ ವರ್ಷಗಳ ನಿರ್ವಹಣೆಗೆ ಶೇ.50 ರ ಸಹಾಯಧನ ನೀಡಲಾಗುತ್ತದೆ. ಡಿಸೇಲ್ ಮೋಟಾರ್, ಕೊಳವೆ ಬಾವಿ, ತಾಳೆ ಹಣ್ಣು ಕಟಾವು ಮಾಡುವ ಯಂತ್ರ, ಅಂತರ ಬೆಳೆ, ಚಾಫ್ ಕಟ್ಟರ್ ಯಂತ್ರಕ್ಕೆ ಶೇ.50 ರ ಸಹಾಯಧನ ನೀಡಲಾಗುತ್ತದೆ. ಹಾಗೆಯೇ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್‍ಕೆವಿವೈ) ಹಾಗೂ ಯಾಂತ್ರಿಕರಣ ಯೋಜನೆ ಸದುಪಯೋಗಕ್ಕೆ ಮನವಿ ಮಾಡಿದರು. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆಯಲ್ಲಿನ ಕೊಯ್ಲೋತ್ತರ ಚಟುವಟಿಕೆಗಳಿಗೆ ಪ್ರೋತ್ಸಾಹಧನದಡಿ ಸೋಲಾರ್ ಪಂಪ್ ಸೆಟ್, ಕ್ಷೇತ್ರ ಮಟ್ಟದಲ್ಲಿ(ಫಾರ್ಮ್ ಗೇಟ್) ವಿಂಗಡನೆ ಪ್ಯಾಕಿಂಗ್ ಮತ್ತು ಸಂಗ್ರಹಣೆ ಘಟಕ, ನೀರು ಸಂಗ್ರಹಣ ಘಟಕಗಳಿಗೆ ಸಹಾಯಧನ ನೀಡಲಾಗುವುದು. ಕಳೆಕೊಚ್ಚುವ ಯಂತ್ರ, ಮರಕತ್ತರಿಸುವ ಯಂತ್ರ, ದೋಟಿ, ಪವರ್ ಸ್ಪ್ರೆಯರ್, ಅಲ್ಯೂಮಿನಿಯಂ ಏಣಿ, ಪವರ್ ವಿಡರ್, ಅಡಿಕೆ ಸಿಪ್ಪೆ ಸುಳಿಯುವ ಯಂತ್ರ, ಕಾಳು ಮೆಣಸು ಬಿಡಿಸುವ ಯಂತ್ರ, ತಳ್ಳುವ ಗಾಡಿ ಇತರೆ ಯಂತ್ರಗಳನ್ನು ಖರೀದಿಸಲು ಸಹಾಯಧನ ನೀಡಲಾಗುವುದು. ಯಾಂತ್ರಿಕರಣ ಯೋಜನೆಯಡಿ ಇತರೆ ವರ್ಗದ ರೈತರಿಗೆ ಶೇ.40 ರ ಸಹಾಯಧನ ನೀಡಲಾಗುತ್ತದೆ ಎಂದು ವಿವರಿಸಿದರು. ಜೇನು ಸಾಕಾಣಿಕೆ ಅಭಿವೃದ್ದಿ ಯೋಜನೆ: ಮಧುವನ ಮತ್ತು ಜೇನು ಸಾಕಾಣಿಕೆ ಅಭಿವೃದ್ದಿ ಕಾರ್ಯಕ್ರಮದಡಿ ಜೇನು ಪೆಟ್ಟಿಗೆ, ಜೇನು ಕುಟುಂಬ ಹಾಗೂ ಜೇನು ಸ್ಟಾಂಡ್‍ಗಳ ಖರೀದಿಗೆ ಸಹಾಯಧನ ನೀಡಲಾಗುವುದು. ಸಾಮಾನ್ಯ ರೈತರಿಗೆ ಶೇ. 75 ರ ಸಹಾಯಧನ ನೀಡಲಾಗುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರ ಸಹಾಯಧನವಿದೆ. ಜಿಲ್ಲೆಯ ರೈತರಿಗೆ ಜೇನು ಕೃಷಿಯನ್ನು ಅಭಿವೃದ್ದಿಗೊಳಿಸುವ ಬಗ್ಗೆ ತರಬೇತಿಯನ್ನು ನೀಡಲಾಗುವುದು. ಖಾಸಗಿ ಮಧುವನ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ ಎಂದರು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ): ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ತಾಳೆ, ಅಂಗಾಂಶ ಬಾಳೆ, ಸಪೋಟ ಮುಂತಾದ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಬಿಪಿಎಲ್ ಕಾಡ್ ದಾರರು, ಸಣ್ಣ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಇಲಾಖೆಯ ಮುಖಾಂತರ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತದೆ. ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು/ ಅಭಿವೃದ್ದಿ ಪಡಿಸಲು ಸಹಾಯಧನ ನೀಡಲಾಗುತ್ತದೆ. ಸಮಗ್ರ ಕೀಟ ರೋಗ ಕಾರ್ಯಕ್ರಮದಡಿ ಅಡಿಕೆ ಎಲೆ ಚುಕ್ಕೆ ರೋಗವನ್ನು ನಿಯಂತ್ರಿಸಲು ಔಷಧಿ ಖರೀದಿಸಲು ಸಾಮಾನ್ಯ ರೈತರಿಗೆ ಶೇ. 75 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರ ಸಹಾಯಧನ ನೀಡಲಾಗುವುದು. ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿ ರೈತರ ಗುಂಪುಗಳ ರಚನೆ, ಆ ಗುಂಪುಗಳ ಮೂಲಕ ಸಾವಯುವ ತೋಟಗಾರಿಕೆ ಪ್ರೋತ್ಸಾಹಿಸಲು ಸಹಾಯಧನ ನೀಡಲಾಗುವುದು. ಪರಂಪರಾಗತ ಕೃಷಿ ವಿಕಾಸ ಯೋಜನೆಯಡಿ ಎರೆಹುಳ ಗೊಬ್ಬರ ಘಟಕ ಸ್ಥಾಪನೆ, ಬಯೋಡೈಜೆಷ್ಟರ್, ಅಝೋಲ್ಲಾ ತೊಟ್ಟಿ, ಸಸ್ಯ ಜನ್ಯ/ ಪ್ರಾಣಿ ಜನ್ಯ ಕೀಟನಾಶಕ ತಯಾರಿಕೆ ಪ್ಲಾಸ್ಟೀಕ್ ಡ್ರಂ ಗೆ ಸಹಾಯಧನ ದೊರೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.