
ಮಡಿಕೇರಿ ಜು.8 NEWS DESK : ಪೊನ್ನಂಪೇಟೆ ತಾಲ್ಲೂಕು ಹಾತೂರು ಬಳಿ ಇರುವ ಪ್ರಸಿದ್ಧ ವನಭದ್ರ ಕಾಳಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಕಾಂಚನ್ ಪೊನ್ನಣ್ಣ ದಂಪತಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ಪ್ರಮುಖರು ಶಾಸಕರ ಹೆಸರಿನಲ್ಲಿ ವಿಶೇಷ ಪೂಜೆ ಆಯೋಜನೆ ಮಾಡಿದ ಹಿನ್ನೆಲೆ ಶಾಸಕ ದಂಪತಿಗಳು, ದೇವಿಯ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಕೊಕ್ಕಂಡ ರೋಷನ್, ಬೂತ್ ಅಧ್ಯಕ್ಷ ಪುಲಿಯಂಡ ರೋಷನ್, ಅಜ್ಜಿಕುಟ್ಟಿರ ಗಿರೀಶ್, ವಿರಾಜಪೇಟೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ಚಂಗಪ್ಪ, ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕುಂದಾಚೀರ ಮಂಜು ದೇವಯ್ಯ, ಹರೀಶ್, ಕಾಂಗ್ರೆಸ್ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









