
ಮಡಿಕೇರಿ ಜು.8 NEWS DESK : ಕೆ ನಿಡುಗಣೆ ಗ್ರಾಮ ಪಂಚಾಯಿತಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಗ್ರಾ.ಪಂ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಕೆ.ನಿಡುಗಣೆ ಗ್ರಾ.ಪಂ ನ 23 ಬಸವ ವಸತಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ( ಹೆಚ್ಚುವರಿ ) ಯೋಜನೆಯಡಿ ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿದರು. ನಂತರ ಗೋ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಾರ್ವತಿ, ಸದಸ್ಯರಾದ ಜಾನ್ಸನ್ ಪಿಂಟೋ, ಎಂ.ಡಿ.ಬೋಪಣ್ಣ , ಜಾನ್ಸಿ ಮಾದಪ್ಪ ಮತ್ತು ಮಡಿಕೇರಿ ತಾಲ್ಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಮಂದ್ರಿರ ಮೊಹನ್ ದಾಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಕ್ಕಲೇರ ಸುಜು ತಿಮ್ಮಯ್ಯ, ಬಗರ್ ಹುಕುಂ ಸದಸ್ಯರಾದ ರೂಪ ಮತ್ತು ಹರಿಪ್ರಸಾದ್, ತಾಲ್ಲೂಕು ಕಾರ್ಯನಿರ್ವಣಧಿಕಾರಿ ಶೇಕರ್, ತಹಶೀಲ್ದರ್ ಪ್ರವೀಣ್ ಮತ್ತು ಗ್ರಾಮಸ್ಥರು ಇದ್ದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿಲ್ಲಾ ಮಟ್ಟದ ಗೋ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.









