
ಮಡಿಕೇರಿ ಜು.8 NEWS DESK : ಐಗೂರು ಹಾಗೂ ಕಿರಂಗೂರು ಗ್ರಾಮಗಳ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಐಗೂರು ಗ್ರಾಮದ ವಿ.ಎಸ್.ಎಸ್.ಎನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಪಾಲ್ಗೊಂಡು, ಹಲವು ವಿಷಯಗಳ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಬಳಿಕ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್ ಗೌಡ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್, ಮಹೇಶ್ ಜೈನಿ, ವಿ.ಕೆ.ಲೋಕೇಶ್, ಶಕ್ತಿ ಕೇಂದ್ರ ಅಧ್ಯಕ್ಷ ಪ್ರಮೋದ್, ಸುದೀರ್, ಹಿರಿಯರಾದ ವಿ.ಎಂ.ವಿಜಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.









