Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಭಗಂಡೇಶ್ವರ-ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಭಗಂಡೇಶ್ವರ-ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 NEWS DESK :  ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿ ಹಾಗೂ ಪವಿತ್ರ ಕ್ಷೇತ್ರ ಶ್ರೀಭಗಂಡೇಶ್ವರ ದೇವಾಲಯಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮತ್ತು ಕುಟುಂಬದವರು ಬುಧವಾರ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಮಹಾಸಂಕಲ್ಪ ಪ್ರಾರ್ಥನೆ ಸಲ್ಲಿಸಿದರು. ಮೊದಲಿಗೆ ಮಹಾ ಗಣಪತಿಗೆ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ನಾಡಿನ ಎಲ್ಲರಲ್ಲಿ ಸಮೃದ್ಧಿ, ಸಂತಸ ತರುವಂತಾಗಲಿ ಎಂದು ಪ್ರಾರ್ಥಿಸಿದರು, ನಂತರ ಮಹಾವಿಷ್ಣು ಮತ್ತು ಸುಬ್ರಮಣ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ಕುಂಕುಮಾರ್ಚನೆ ಪೂಜೆ ಸಲ್ಲಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ತಾಯಿ ಕಾವೇರಿ ಮಾತೆ ಶಾಸಕರಿಗೆ ಒಳಿತು ಉಂಟುಮಾಡಲಿ, ಸರ್ಕಾರದಲ್ಲಿ ಮತ್ತಷ್ಟು ಅವಕಾಶ ದೊರೆಯಲಿ ಎಂದು ಪ್ರಾರ್ಥಿಸಿದರು. ವಿಶೇಷ ಪೂಜೆ ನಂತರ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹುಟ್ಟು ಹಬ್ಬದ ಪ್ರಯುಕ್ತ ಕೊಡಗಿನ ಜನತೆ ಹಾಗೂ ನಾಡಿನ ಜನರಿಗೆ ಸಮೃದ್ಧಿ ತರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು. ತಾಯಿ ಕಾವೇರಿ ಮಾತೆ ಇಡೀ ನಾಡಿಗೆ ಒಳಿತು ಮಾಡುವಂತಾಗಲಿ, ಕ್ಷೇತ್ರದ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿ ಆಗಬೇಕೆಂಬುದು ಆಶಯವಾಗಿದೆ. ಆ ನಿಟ್ಟಿನಲ್ಲಿ ಪ್ರಾರ್ಥಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಆಗಿದೆ. ಕಳೆದ 9 ದಶಕದಲ್ಲಿಯೇ ಕೆಆರ್‍ಎಸ್ ಜಲಾಶಯ ಜೂನ್ ತಿಂಗಳಲ್ಲಿ ಭರ್ತಿಯಾಗಿ ಮುಖ್ಯಮಂತ್ರಿ ಅವರು ಬಾಗಿನ ಅರ್ಪಿಸಿದ್ದು ವಿಶೇಷವಾಗಿದೆ ಎಂದರು. ಮುಂಗಾರು ಅಧಿವೇಶನ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಆಗಬೇಕಿರುವ ಕೆಲಸ ಕಾರ್ಯಗಳ ಸಂಬಂಧ ಕಂದಾಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಕೆಲವು ತಿದ್ದುಪಡಿಗಳು ಆಗಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಹಾಗೆಯೇ ವನ್ಯಪ್ರಾಣಿ ಹಾಗೂ ಮಾನವ ಸಂಘರ್ಷ ತಡೆಯುವಲ್ಲಿ ಕೆಲವು ಕ್ರಮ ಕೈಗೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ್, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ದೇವಾಲಯ ಸಮಿತಿ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ NEWS DESK ಸೆ.4 : ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು…

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.