Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ ಗಳ ಅಬ್ಬರ : ನೆಲಸಮಗೊಳಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ ಗಳ ಅಬ್ಬರ : ನೆಲಸಮಗೊಳಿಸಲು ಆಗ್ರಹ*

ಜುಲೈ 9, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜು.9 : ಕೊಡಗು ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆಯನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್‌ ಗಳನ್ನು ತಕ್ಷಣ ನೆಲಸಮಗೊಳಿಸಬೇಕೆಂದು ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಶನ್ ಸಂಸ್ಥೆ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಶನ್ ನ ಅಧ್ಯಕ್ಷ ಕರ್ನಲ್ ಚೆಪ್ಪುಡಿರ ಪಿ.ಮುತ್ತಣ್ಣ ಅವರು ಜಿಲ್ಲೆಯ ವಿವಿಧೆಡೆ ಅಕ್ರಮ ರೆಸಾರ್ಟ್‌ ಗಳು ತಲೆ ಎತ್ತಿದ್ದು, ಭೂಕುಸಿತ ಪ್ರದೇಶಗಳಲ್ಲಿ ಅಪಾಯವನ್ನು ಎದುರಿಸುತ್ತಿವೆ. ಒಂದು ವೇಳೆ ಭೂಕುಸಿತ ಉಂಟಾಗಿ ರೆಸಾರ್ಟ್ಗಳು ಹಾನಿಗೀಡಾದರೆ ಇವುಗಳಲ್ಲಿ ತಂಗಿರುವ ಪ್ರವಾಸಿಗರು ಹಾಗೂ ಉದ್ಯೋಗಿಗಳು ಸಾವಿಗೀಡಾಗುವ ಸಾಧ್ಯತೆಗಳಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಅನ್ವಯ ಕೊಡಗಿನಲ್ಲಿ ತೋಟ, ಜಮ್ಮಾ, ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪರಿವರ್ತಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ 2018ರಲ್ಲಿ ಕೊಡಗಿನ ಬೆಟ್ಟ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತಗಳ ನಂತರ, ಕರ್ನಾಟಕ ಸರ್ಕಾರವು 2020 ಜೂನ್ 4ರಂದು ಕೊಡಗಿನಲ್ಲಿ ವಾಣಿಜ್ಯ ಭೂ ಪರಿವರ್ತನೆಗಾಗಿ ಯಾವುದೇ ಅರ್ಜಿಯನ್ನು ಪರಿಶೀಲಿಸಲು ಮತ್ತು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಅಂತಹ ಪರಿವರ್ತನೆಗಳಿಗೆ ಅನುಮತಿ ನಿರಾಕರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿಯನ್ನು ರಚಿಸುವ ಆದೇಶವನ್ನು ಹೊರಡಿಸಿತು. ಸರ್ಕಾರ ಆದೇಶ ಹೊರಡಿಸಿದ ನಂತರವೂ ಇದನ್ನು ಉಲ್ಲಂಘಿಸಿ ಕೊಡಗಿನ ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ರೆಸಾರ್ಟ್ಗಳು ತಲೆ ಎತ್ತಿರುವುದು ಕಂಡು ಬಂದಿದೆ. ಬಿಳಿಗಿರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಳಿಗಿರಿ ಗ್ರಾಮದಲ್ಲಿ, ಮಕ್ಕಂದೂರು ಗ್ರಾ.ಪಂ ವ್ಯಾಪ್ತಿಯ ಹಾಲೇರಿ ಗ್ರಾಮದಲ್ಲಿ, ಕೆದಕಲ್ ಗ್ರಾ.ಪಂ ವ್ಯಾಪ್ತಿಯ ಮೋದೂರು ಗ್ರಾಮದಲ್ಲಿ ಮತ್ತು ಮಡಿಕೇರಿ ಸಮೀಪ ಗಾಳಿಬೀಡು ಗ್ರಾಮದಲ್ಲಿ ರೆಸಾರ್ಟ್ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಮಳೆಗಾಲದಲ್ಲಿ ಅಥವಾ ನಂತರದ ಮಳೆಗಾಲದಲ್ಲಿ ರೆಸಾರ್ಟ್‌ ಗಳು ಭೂಕುಸಿತದಿಂದ ಕೊಚ್ಚಿ ಹೋಗುವ ಸಾಧ್ಯತೆ ಇದೆ. ಇದರಿಂದ ರೆಸಾರ್ಟ್‌ ಗಳಲ್ಲಿ ವಾಸಿಸುವ ಅತಿಥಿಗಳು, ಕೆಲಸ ಮಾಡುವ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರ ಜೀವಕ್ಕೆ ಕೂಡ ಅಪಾಯ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಜಿಲ್ಲಾಡಳಿತ ತುರ್ತಾಗಿ ಅಕ್ರಮ ರೆಸಾರ್ಟ್ ಪ್ರಕರಣವನ್ನು ತನಿಖೆಗೆ ಒಳಪಡಿಸಿ ತಪ್ಪೆಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ರೆಸಾರ್ಟ್ಗಳನ್ನು ನೆಲಸಮಗೊಳಿಸಬೇಕು ಎಂದು ಕರ್ನಲ್ ಸಿ.ಪಿ.ಮುತ್ತಣ್ಣ ಒತ್ತಾಯಿಸಿದರು. ಮಕ್ಕಂದೂರಿನಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್ ಕುರಿತು ಮಾಹಿತಿ ಹಕ್ಕು ನಿಯಮದಡಿ ಜಿಲ್ಲಾಡಳಿತದಿಂದ ಮಾಹಿತಿ ಬಯಸಲಾಗಿತ್ತು. ಇಲ್ಲಿ ರೆಸಾರ್ಟ್ ನಿರ್ಮಿಸಲು ಯಾರೂ ಅನುಮತಿ ನೀಡಿಲ್ಲವೆಂದು ಉತ್ತರ ದೊರೆತ್ತಿದೆ. ಅಕ್ರಮ ರೆಸಾರ್ಟ್‌ ಗಳ ಬಗ್ಗೆ ಜಿಲ್ಲಾಧಿಕಾರಿಗಳನ್ನು ಕೇಳಿದಾಗ ತಮಗೇನು ತಿಳಿದಿಲ್ಲವೆಂದು ಹೇಳಿದ್ದು, ಇದು ಆಶ್ಚರ್ಯಕ್ಕೆ ಕಾರಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇರುವುದರಿಂದ ಕರ್ನಾಟಕ ಭೂಕಂದಾಯ ಕಾಯ್ದೆಯ ಉಲ್ಲಂಘನೆ ಮತ್ತು ಅಕ್ರಮ ರೆಸಾರ್ಟ್‌ ಗಳ  ನಿರ್ಮಾಣದ ವಿರುದ್ಧ ತಾವು ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದರು. ಕರ್ನಾಟಕ ಭೂಕಂದಾಯ ಕಾಯ್ದೆಯನ್ನು ಉಲ್ಲಂಘಿಸಿ ಭೂಪರಿವರ್ತನೆ ಮಾಡುತ್ತಿರುವ ಜಿಲ್ಲಾಡಳಿತದ ಕ್ರಮದ ವಿರುದ್ಧ ಈಗಾಗಲೇ ನ್ಯಾಯಾಲಯದಲ್ಲಿ ಹೋರಾಟ ಮುಂದುವರಿದಿದೆ. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಹೊರ ಬೀಳಲಿದೆ ಎಂದರು. ಅಕ್ರಮ ಭೂಪರಿವರ್ತನೆ ಮತ್ತು ರೆಸಾರ್ಟ್ಗಳ ವಿರುದ್ಧ ಅಖಿಲ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ಎಲ್ಲಾ ಜನಾಂಗಗಳು ಹಾಗೂ ಸಂಘ, ಸಂಸ್ಥೆಗಳು ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ ಎಂದು ಕರ್ನಲ್ ಚೆಪುö್ಪಡಿರ ಪಿ.ಮುತ್ತಣ್ಣ ಹೇಳಿದರು. ಸಮಾಜ ಸೇವಕ ಗೋಪಿನಾಥ್ ವೈ.ಡಿ ಮಾತನಾಡಿ ಅಕ್ರಮ ರೆಸಾರ್ಟ್‌ ಗಳ ನಿರ್ಮಾಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಾಸಕರಾದಿಯಾಗಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಗ್ರಾಮಸ್ಥರ ಸಹಿ ಇರುವ ದೂರನ್ನು ಸಲ್ಲಿಸಲಾಗಿದೆ. ಆದರೆ ಇಲ್ಲಿಯವರೆಗೆ ಯಾರಿಂದಲೂ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲವೆಂದು ಆರೋಪಿಸಿದರು. ಸೋಮವಾರಪೇಟೆ ತಾಲ್ಲೂಕಿನ ನೈಸರ್ಗಿಕ ಸೌಂದರ್ಯದ ಮಕ್ಕಳ ಗುಡಿಬೆಟ್ಟ ವ್ಯಾಪ್ತಿಯಲ್ಲಿ ರೆಸಾರ್ಟ್ ನಿರ್ಮಾಣಗೊಳ್ಳುತ್ತಿದ್ದು, ಇದರಿಂದ ಗ್ರಾಮಕ್ಕೆ ಅಪಾಯವಿದೆ. ರೆಡ್ ಅಲರ್ಟ್ ಸಂದರ್ಭ ಈ ಭಾಗದಲ್ಲಿರುವ ಸುಮಾರು 250 ಕ್ಕೂ ಹೆಚ್ಚು ಕುಟುಂಬಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ನೋಟಿಸ್ ನೀಡುತ್ತಾರೆ. ಆದರೆ ಗ್ರಾಮಸ್ಥರ ವಿರೋಧದ ನಡುವೆ ತಲೆ ಎತ್ತಿರುವ ರೆಸಾರ್ಟ್ಗೆ ಯಾವುದೇ ನೋಟಿಸ್ ನೀಡುತ್ತಿಲ್ಲ ಮತ್ತು ಇದರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾ.ಪಂ ಸಭೆಗಳಲ್ಲಿ ‌ರೆಸಾರ್ಟ್‌ ಗೆ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಂಡಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಹೊರಗಿನ ಪ್ರಭಾವಿ ವ್ಯಕ್ತಿಗಳ ಬೆಂಬಲದಿಂದ ಜಿಲ್ಲೆಯ ವಿವಿಧೆಡೆ ಅಕ್ರಮ ರೆಸಾರ್ಟ್‌ ಗಳು ನಿರ್ಮಾಣಗೊಳ್ಳುತ್ತಿವೆ, ಮರಗಳು ಹನನವಾಗುತ್ತಿವೆ, ನಿಷೇಧವಿದ್ದರೂ ಭಾರೀ ಭಾರದ ವಾಹನಗಳು ರೆಸಾರ್ಟ್ ಕಾಮಗಾರಿಗಾಗಿ ಸಂಚರಿಸುತ್ತಿವೆ ಎಂದು ಗೋಪಿನಾಥ್ ವೈ.ಡಿ ಗಮನ ಸೆಳೆದರು. ಕಿರಗಂದೂರು ಗ್ರಾಮಸ್ಥರು ಮಾತನಾಡಿ ಕರ್ನಾಟಕ ಭೂಕಂದಾಯ ಕಾಯ್ದೆಯ ಉಲ್ಲಂಘನೆ ಮತ್ತು ಅಕ್ರಮ ರೆಸಾರ್ಟ್‌ ಗಳ ನಿರ್ಮಾಣದ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕಿರಗಂದೂರು ಗ್ರಾಮಾಡಳಿತ ಮಂಡಳಿಯ ಅಧ್ಯಕ್ಷ ಸಿ.ಕೆ.ಚಿದಾನಂದ, ಕಾರ್ಯದರ್ಶಿ ಬಿ.ಬಿ.ರಶಿನ್ ಕುಮಾರ್, ಗ್ರಾಮಸ್ಥರಾದ ನಿತಿನ್ ಕೆ.ಜಿ ಹಾಗೂ ಗಿರೀಶ್ ಎಸ್.ಸಿ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.