Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜು.13 ರಂದು ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜು.13 ರಂದು ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಪ್ರದರ್ಶನ*

ಜುಲೈ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 NEWS DESK : ಕೋಮು ದ್ವೇಷದ ಭಾವನೆಗಳು ಸಮಾಜದಲ್ಲಿ ದಳ್ಳುರಿಯಾಗಿ ಕಾಣಿಸಿಕೊಳ್ಳುತ್ತಿರುವ ಈ ದಿನಗಳಲ್ಲಿ, ಶಾಂತಿ ಸಹಬಾಳ್ವೆಯನ್ನು ಸಾರಿದ ಸಾಮ್ರಾಟ ಅಶೋಕ ಪ್ರಸ್ತುತ ಎನಿಸಿಕೊಳ್ಳುತ್ತಾನೆ. ಆತನ ಸಂದೇಶಗಳನ್ನು ಜನಮಾನಸಕ್ಕೆ ತಲುಪಿಸುವ ಪ್ರಯತ್ನವಾಗಿ ಜು.13 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬೆಂಗಳೂರಿನಲ್ಲಿ ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಪ್ರದರ್ಶನ ನಡೆಯಲಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಾಜಶೇಖರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಪುರ ಬುದ್ಧಿಸ್ಟ್ ಅಕಾಡೆಮಿ ಆಫ್ ಪರ್ಫಾಮಿಂಗ್ ಆರ್ಟ್‍ನಿಂದ ಅಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ಬೆಂಗಳೂರಿನ ವಸಂತ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಪರಿಕಲ್ಪನೆ ಮತ್ತು ನಿರ್ದೇಶನ ನಾಗಪುರದ ಅಶೋಕ ಜಾಂಬುಲ್ಕರ್ ಹಾಗೂ ನಿರ್ಮಾಣ ನಾಗಪುರದ ಎ.ವಂದನಾ ಜಾಂಬುಲ್ಕರ್ ಅವರದೆಂದು ಮಾಹಿತಿ ನೀಡಿದರು. ‘ಕಳಿಂಗ ಯುದ್ಧ’ದ ಗೆಲುವಿನ ನಂತರ, ಯುದ್ಧದಿಂದ ಉಂಟಾದ ಸಾವು ನೋವುಗಳಿಂದ ಜರ್ಝರಿತನಾದ ಸಾಮ್ರಾಟ್ ಅಶೋಕ ಶಸ್ತ್ರ ತ್ಯಾಗ ಮಾಡಿ ಶಾಂತಿ ಸಹಬಾಳ್ವೆಯನ್ನು ಸಾರುವ ಬುದ್ಧ ಧರ್ಮದತ್ತ ವಾಲುತ್ತಾನೆ. ತನ್ನಿಬ್ಬರು ಮಕ್ಕಳನ್ನು ಬುದ್ಧನ ಸಂದೇಶಗಳನ್ನು ಸಾರಲು ಕಳುಹಿಸಿಕೊಡುವ ‘ಅಶೋಕ’, ಯುದ್ಧ, ಕೋಮುದ್ವೇಷದ ದಳ್ಳುರಿಯ ಈ ದಿನಗಳಲ್ಲಿ ಅತ್ಯಂತ ಪ್ರಸ್ತುತನೆನಿಸಿಕೊಳ್ಳುತ್ತಾನೆ. ಈ ಹಿನ್ನೆಲೆ ಆತನ ಸಂದೇಶಗಳನ್ನು ಸಮಾಜದಲ್ಲಿ ಪಸರಿಸುವ ಪ್ರಯತ್ನವಾಗಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದು ತಿಳಿಸಿದರು. :: ಉದ್ಘಾಟನೆ :: ನಾಟಕ ಆರಂಭಕ್ಕೂ ಮುನ್ನ ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮವನ್ನು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಉದ್ಘಾಟಿಸಲಿದ್ದಾರೆ. ನಾಟಕವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ, ಸಚಿವರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆಂದರು. ದಸಂಸ ಜಿಲ್ಲಾ ಸಂಚಾಲಕ ಎಂ.ಎನ್.ರಾಜಪ್ಪ ಮಾತನಾಡಿ, ಸಾಮ್ರಾಟ್ ಅಶೋಕ ನಾಟಕ ಪ್ರದರ್ಶನದಲ್ಲಿ ಜಿಲ್ಲೆಯ 150ಕ್ಕೂ ಹೆಚ್ಚಿನ ಮಂದಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ದಸಂಸ ಪ್ರಮುಖರು, ಸದಸ್ಯರು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎನ್.ಆರ್. ದೇವರಾಜು, ಪ್ರಧಾನ ಕಾರ್ಯದರ್ಶಿ ಎಂ.ಈ.ಪೊನ್ನಪ್ಪ, ಜಿಲ್ಲಾ ಸದಸ್ಯರಾದ ಎನ್.ಸಿ.ಗೋವಿಂದ ರಾಜು, ಕೊಡ್ಲಿಪೇಟೆ ಹೋಬಳಿ ಸಂಚಾಲಕರಾದ ಡಿ.ಬಿ.ಕೇಶವ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ NEWS DESK ಸೆ.4 : ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು…

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.