ಕುಶಾಲನಗರ ಜು.10 NEWS DESK : ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ವರ್ಗದಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜೆ.ಸಿ.ಟಿ.ಯು ಹಾಗೂ ಎಸ್.ಕೆ.ಎಂ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಕಾರ್ಮಿಕರ ಹತ್ತಲವಾರು ಬೇಡಿಕೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಅವರು ಪಟ್ಟು ಹಿಡಿದರು. ನಂತರ ತಹಶಿಲ್ದಾರರ ಕಚೇರಿಗೆ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ಪ್ರಧಾನ ಮಂತ್ರಿಯವರಿಗೆ ಮನವಿ ಪತ್ರ ನೀಡಿದರು. ಸಿ.ಐ.ಟಿ.ಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ಕಾರ್ಮಿಕ ಆಗ್ರಹ, ಬೇಡಿಕೆಗಳನ್ನು ಈಡೇರಿಸಬೇಕು ಎಂದರು. ಈ ಸಂದರ್ಭ ವಿವಿಧ ಸಂಘಟನೆಗಳ ಪ್ರಮುಖರಾದ ಉದಯ್ ಕುಮಾರ್, ಜಮುನಾ, ಸಾವಿತ್ರಿ, ರಾಣಿ, ಲಲಿತಮ್ಮ, ರಘು, ಗಿರೀಶ್, ಕೃಷ್ಣಕುಮಾರ್, ಜಯರಾಮ್, ಯೋಗೇಶ್, ಜಯಣ್ಣ, ಮಂಜುನಾಥ್ ಹಾಗೂ ಐವತ್ತಕ್ಕೂ ಅಧಿಕ ಜನರು ಭಾಗವಹಿಸಿದ್ದರು.











