ವಿರಾಜಪೇಟೆ ಜು.10 NEWS DESK : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಹಾಗೂ ನಾನಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ವಿರಾಜಪೇಟೆಯ ಕಾರು ನಿಲ್ದಾಣದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿತು. ವಿರಾಜಪೇಟೆಯ ಮಾರಿಯಮ್ಮ ದೇವಾಲಯದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಕಾರು ನಿಲ್ದಾಣದಲ್ಲಿ ಜಮಾವಣೆಗೊಂಡರು. ನಂತರ ಮಾತನಾಡಿದ ಸಿ.ಐ.ಟಿ.ಯು ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು, ಕೇಂದ್ರ ಸರಕಾರವು ಕಾರ್ಮಿಕ ನೀತಿಗಳಿಗೆ ವಿರುದ್ದವಾಗಿ ಕಾನೂನುಗಳನ್ನು ಜಾರಿಗೆ ತಂದಿದೆ. ಇಂದು ರಾಜ್ಯಾದಾದ್ಯಂತ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಮುಷ್ಕರ ನಡೆಯುತ್ತಿದೆ. ಬೆಲೆ ಏರಿಕೆಯಿಂದಾಗಿ ಕಾರ್ಮಿಕರ ಬದುಕು ಶೋಚನೀತ ಸ್ಥಿತಿಗೆ ತಲುಪಿದ್ದಾರೆ. ಸುಮಾರು 70 ವರ್ಷಗಳಿಂದ ಕಾರ್ಮಿಕರಿಗೆ ನಿಗದಿಗೊಳಿಸಿರುವ ದುಡಿಮೆಯ ಸಮಯ 8 ಗಂಟೆ. ಆದರೆ ಕೇಂದ್ರ ಸರಕಾರವು 8 ಗಂಟೆ ಬದಲು 12 ಗಂಟೆ ದುಡಿಯುವಂತೆ ಕಾನೂನು ಜಾರಿಗೆ ತಂದಿದೆ. ಇದರಿಂದ ಕಾರ್ಮಿಕರ ಶ್ರೇಯಸ್ಸು ಕಾಯುವ ಬದಲು ಕಾಪೋರೇಟ್ ಸಂಸ್ಥೆಗಳಿಗೆ ಲಾಭ ತರುವಂತಿದೆ. ದುಡಿಮೆಯ ಹಣವು ಅಭಿವೃದ್ಧಿ ಹೆಸರಲ್ಲಿ ಕಾರ್ಪೋರೇಟ್ ಸಂಸ್ಥೆಯ ಮಡಿಲಿಗೆ ಸೇರುತ್ತಿದೆ ಎಂದು ಟೀಕಿಸಿದರು. ಸಂಘಟನೆಯ ಪ್ರಮುಖರಾದ ಡಾ. ದುರ್ಗಾ ಪ್ರಸಾದ್ ಮಾತನಾಡಿ, ಎಂಟು ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರಕಾರ ಕಾಪೆರ್Çರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಬೇಕು. ಇವತ್ತಿನ ಬೆಲೆಗಳಿಗೆ ಅನುಗುಣವಾಗಿ ಎಲ್ಲ ಸಂಘಟಿತ ಅಸಂಘಟಿತ ಗುತ್ತಿಗೆ ಕಾರ್ಮಿಕರು ರಾಷ್ಟ್ರ ವ್ಯಾಪಿ 26 ಸಾವಿರ ಹಾಗೂ ರಾಜ್ಯವ್ಯಾಪಿ ಮೂವತ್ತಾರು ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಅವಕಾಶ ವೇತನ ಜಾರಿ ಮಾಡಬೇಕು. ಕಟ್ಟಡ ಕಾರ್ಮಿಕರು ಆಟೋ ಟ್ಯಾಕ್ಸಿ ಚಾಲಕರು ಮನೆ ಕೆಲಸಗಾರರು ಸೇರಿದಂತೆ ಇನ್ನಿತರ ಎಲ್ಲ ಅಸಂಘಟಿತ ಕಾರ್ಮಿಕರ ಮತ್ತು ಕೃಷಿ ತೋಟ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರಿಗೆ ಕನಿಷ್ಠ ಮಾಸಿಕ 9000 ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು. ಎನ್‍ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ ಹಳೆಯ ಪೆನ್ಷನ್ ಸ್ಕೀಮ್ ಅನ್ನು ಮರು ಸ್ಥಾಪಿಸಬೇಕು. ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು ಆರೋಗ್ಯದ ಹಕ್ಕು ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು. ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂಸ್ವಾಧೀನ ಹಾಗೂ ಮೂರು ಕರಾಳ ಕೃಷಿ ಕಾ0iÉ್ದು ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು. ಸರರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಪ್ರತಿ 5ನೇ ತಾರೀಖಿನ ಒಳಗೆ ಕಾರ್ಮಿಕರ ವೇತನ ನೀಡಬೇಕು, ಹೆರಿಗೆ ಭತ್ಯೆ, ಇಎಸ್‍ಐ ಸೌಲಭ್ಯ, ಪಿ.ಎಫ್ ಹಣವನ್ನು ಸರಿಯಾದ ರೀತಿಯಲ್ಲಿ ಗುತ್ತಿಗೆದಾರರು ನೀಡುವಂತಹ ನೀತಿಯನ್ನು ಜಾರಿಗೊಳಿಸಬೇಕು, ಕಾರ್ಮಿಕರ ಸಮಸ್ಯೆ ಮತ್ತು ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ಸರಕಾರ ಇದನ್ನು ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಟ್ಟು ಕಾರ್ಮಿಕರ ಏಳಿಗೆಗಾಗಿ ನೀತಿಗಳನ್ನು ರೂಪಿಸಬೆಕೆಂದು ಒತ್ತಾಯಿಸಿದರು. ಮುಖಂಡರುಗಳಾದ ಎ.ಐ.ಟಿ.ಯು. ಯ ವಕೀಲರಾದ ಸುನೀಲ್ ಮತ್ತು ಮಣಿ, ಸಿ.ಐ.ಟಿ.ಯು ಸಂಘಟನೆಯ ಪದಾಧಿಕಾರಿಗಳಾದ ಎನ್ ಡಿ ಕುಟ್ಟಪ್ಪ, ಎ. ಮಹಾದೇವ, ಶಾಜಿ ರಮೇಶ್, ರಾಚಪ್ಪಜಿ, ಪುಷ್ಪ, ಹರಿದಾಸ್, ಅಂಗನವಾಡಿ ನೌಕರರ ಸಂಘಟನೆಯ ಜಿಲ್ಲಾಧ್ಯಕ್ಷೆ ಸುಮಿತ್ರ, ವಿರಾಜಪೇಟೆ ತಾಲೂಕು ಅಧ್ಯಕ್ಷೆ ಶೀಲಾ, ಬಿಸಿಯೂಟ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕುಸುಮ, ಪೊನ್ನಂಪೇಟೆಯ ತಾಲೂಕು ಅಧ್ಯಕ್ಷರಾದ ಜಯಂತಿ ಮತ್ತು ನ್ಯಾನ್ಸಿ, ತೋಟ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ಪುಷ್ಪ, ಜನರಲ್ ವರ್ಕರ್ಸ್ ಯೂನಿಯನ್ ಜಿಲ್ಲಾ ಅಧ್ಯಕ್ಷರಾದ ಹೆಚ್. ಬಿ. ರಮೇಶ್,ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಪದ್ಮಿನಿ ಶ್ರೀಧರ್, ಎಲ್‍ಐಸಿ ಮತ್ತು ಆಸ್ಪತ್ರೆ ಸಿಬ್ಬಂದಿ, ನೌಕರರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.










