ಮಡಿಕೇರಿ ಜು.10 NEWS DESK : ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟಂತೆ 13 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 32 ಅಂಗನವಾಡಿ ಸಹಾಯಕಿ ಹುದ್ದೆಗೆ ಜು.8 ರಂದು ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್‍ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆ ಇದ್ದಲ್ಲಿ ಜುಲೈ, 15 ರ ಕಚೇರಿ ವೇಳೆ 5.30 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ ದೂ.ಸಂ.08272-295087 ನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.










