
ನಾಪೋಕ್ಲು ಜು.10 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ಹಾಗೂ ಸೋಮವಾರಪೇಟೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆ ಆಗ್ರಹಿಸಿದೆ. ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಮುಷ್ಕರದ ಹಿನ್ನಲೆಯಲ್ಲಿ ಶಿರಸ್ತೇದಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನರ್ದೇಶಕರ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು. ಈ ಸಂದರ್ಭ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಸಿ.ಯು.ಪವಿತ್ರ, ಕಾರ್ಯದರ್ಶಿ ಎಂ.ಆಶಾಲತಾ, ಉಪಾಧ್ಯಕ್ಷೆ ವನಜ, ಕ್ಷೇಮ ನಿಧಿ ಅಧ್ಯಕ್ಷೆ ಸುಮತಿ, ಸೋಮಾರಪೇಟೆಯ ಅಧ್ಯಕ್ಷರಾದ ಧನಲಕ್ಷ್ಮಿ, ಕಾರ್ಯದರ್ಶಿ ತಾರಲೋಬೋ ಹಾಗೂ ಮಡಿಕೇರಿ ತಾಲ್ಲೂಕು ಮತ್ತು ಸೋಮವಾರಪೇಟೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.








