ಮಡಿಕೇರಿ ಜು.10 NEWS DESK : ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿಗೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ/ಸರ್ಟಿಫಿಕೆಟ್ ಕೋರ್ಸ್‍ಗಳಿಗೆ https://minority.ksouportal.com (ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪೋರ್ಟಲ್) https://dom.karnataka.gov.in (ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು) ಅಥವಾ ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಡ್ಮಿಷನ್ ಲಿಂಕ್ (hಣಣಠಿs://miಟಿoಡಿiಣಥಿ.ಞsouಠಿoಡಿಣಚಿಟ.ಛಿom) ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲ್ಲಿಸಬಹುದು. ವಿದ್ಯಾರ್ಥಿಯು ಖುದ್ದಾಗಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿ ಮೈಸೂರು ಅಥವಾ ತಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಗಳಿಗೆ ಭೇಟಿ ನೀಡಬಹುದು ಅಥವಾ ಪ್ರಾದೇಶಿಕ ಕೇಂದ್ರ, ಹಜ್ ಕಚೇರಿ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 25 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು). ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ, ಪೋಷಕರ ಕುಟುಂಬದ ವಾರ್ಷಿಕ ಆದಾಯವು ರೂ.8 ಲಕ್ಷಗಳನ್ನು ಮೀರಬಾರದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.










