ವಿರಾಜಪೇಟೆ ಜು.10 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮದಿನವನ್ನು ವಿರಾಜಪೇಟೆಯ ವಿ. ಬಾಡಗ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಆಚರಿಸಲಾಯಿತು. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ವಿ. ಬಾಡಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಕಂಜಿತಂಡ ಗಿಣಿ ಮೊಣ್ಣಪ್ಪ, ಶಾಸಕರ ಹುಟ್ಟುಹಬ್ಬವನ್ನು ಜನೋಪಯೋಗಿ ಕಾರ್ಯ ಚಟುವಟಿಕೆಗಳ ಮೂಲಕ ಆಯೋಜಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ವಿ. ಬಾಡಗದ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಆಚರಿಸಿದ್ದು ಹೆಚ್ಚು ಸಂತೋಷ ಮೂಡಿಸಿದೆ ಎಂದು ಹೇಳಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕೊಂಗಂಡ ಕಾಶಿ ಕಾರ್ಯಪ್ಪ, ಮಳವಂಡ ದೇವಯ್ಯ, ಕಂಜಿತಂಡ ಪೂವಣ್ಣ, ಚೇಮೀರ ಧವನ್, ಮುಲ್ಲೆಂಗಡ ಪ್ರಧಾನ್, ತೀತಿಮಾಡ ಈಶ್ವರ, ಕಂಜಿತಂಡ ಚಂಗಪ್ಪ ಸೇರಿದಂತೆ ಶಾಲಾ ಶಿಕ್ಷಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.











