ವಿರಾಜಪೇಟೆ ಜು.10 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‍ನ ಕೃಷಿ ಕಾರ್ಯಕ್ರಮದಡಿಯಲ್ಲಿ ವಿರಾಜಪೇಟೆ ವಲಯದ ಬಿಟ್ಟಂಗಾಲ ಕಾರ್ಯಕ್ಷೇತ್ರದ ಬಿ.ಶೆಟ್ಟಿಗೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪವಲಯ ಅರಣ್ಯಾಧಿಕಾರಿ ಶ್ರೀಧರ್ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪರಿಸರ ಸಂರಕ್ಷಣೆ ಸಲುವಾಗಿ ಉತ್ತಮವಾದ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ ಎಂದರು. ಜನಸಂಖ್ಯೆ ಹೆಚ್ಚಾದಂತೆ ಅರಣ್ಯ ಸಂಖ್ಯೆ ಕೂಡ ಕಡಿಮೆಯಾಗುತ್ತದೆ. ಗಿಡ ನೆಡುವಿಕೆಯಿಂದ ಅರಣ್ಯ ಸಂರಕ್ಷಿಸಬಹುದು, ಪರಿಸರವು ನಮಗೆ ಆಹಾರ, ನೀರು, ಗಾಳಿ ಮತ್ತು ಇತರ ಅಗತ್ಯ ಸಂಪನ್ಮೂಲಗಳನ್ನು ಒದಗಿಸುತ್ತದೆ ಎಂದರು. ಬಿಟ್ಟಂಗಾಲ ಒಕ್ಕೂಟದ ಅಧ್ಯಕ್ಷ ರಂಜನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ವಸಂತ್, ವಲಯ ಮೇಲ್ವಿಚಾರಕರಾದ ಶಿವಕುಮಾರ್, ಎಸ್‍ಡಿಎಂಸಿ ಅಧ್ಯಕ್ಷರಾದ ಕವಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಸಂಘದ ಸದಸ್ಯರು ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ಸೇವಾ ಪ್ರತಿನಿಧಿ ಸಬಿತ ಇದ್ದರು.










