ಮಡಿಕೇರಿ ಜು.10 NEWS DESK : ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯ ನೂತನ ಕೊಠಡಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಇಂದಿನ ಯುಗದಲ್ಲಿ ಸ್ಥಳೀಯ ಭಾಷೆಯೊಂದಿಗೆ ಆಂಗ್ಲ ಭಾಷೆಯು ಅತ್ಯಂತ ಮಹತ್ವ ಪಡೆದಿದ್ದು, ಮಕ್ಕಳು ಚಿಕ್ಕದರಿಂದಲೇ ಆಂಗ್ಲ ಭಾಷೆ ಕಲಿತುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು. ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲವನ್ನು ಕಲಿತುಕೊಂಡು ತಮ್ಮ ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ವಲಯ ಕಾಂಗ್ರೆಸ್ ಅಧ್ಯಕ್ಷ ಟಾಟು ಮೊಣ್ಣಪ್ಪ, ಸ್ಥಳೀಯ ಪ್ರಮುಖರು, ಪಕ್ಷದ ಪ್ರಮುಖರು ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.











