ಮಡಿಕೇರಿ ಜು.10 NEWS DESK : ಮಡಿಕೇರಿ ನಗರದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾನ್ವೆಂಟ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣವನ್ನು ಜು.11 ರಂದು ಉದ್ಘಾಟಿಸಲಾಗುವುದು ಎಂದು 17ನೇ ವಾರ್ಡ್ ನ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರು ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಲಿದ್ದಾರೆ. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪೌರಾಯುಕ್ತ ಹೆಚ್.ಆರ್.ರಮೇಶ್, ಸದಸ್ಯ ಮುಸ್ತಫ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಟೌನ್ ಬ್ಯಾಂಕ್ ನಿರ್ದೇಶಕರು ಹಾಗೂ ನಗರಸಭಾ ಸ್ಥಾಯಿ ಸಮಿತಿಯ ಮಾಜಿ ಸದಸ್ಯರಾದ ಪ್ರತಿಭಾ ಶೆಟ್ಟಿ, ಜಿಲ್ಲಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.










