ಸುಂಟಿಕೊಪ್ಪ ಜು.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪ ವಲಯದ ವತಿಯಿಂದ ಜ್ಞಾನದೀಪ ಯೋಜನೆಯಡಿಯಲ್ಲಿ ಕಾನ್‍ಬೈಲ್ ಸರಕಾರಿ ಪ್ರಾಥಮಿಕ ಶಾಲೆಗೆ ಓರ್ವ ಶಿಕ್ಷಕರ ನಿಯೋಜನೆ ಮಾಡಲಾಯಿತು. ಕಾನ್‍ಬೈಲ್ ಶಾಲೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 52 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪೂರ್ಣಕಾಲಿಕವಾಗಿ ಇರ್ವರು ಶಿಕ್ಷಕರು ಮತ್ತು ಅರೆಕಾಲಿಕವಾಗಿ ಓರ್ವ ಶಿಕ್ಷಕಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರಿಂದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು ಜ್ಞಾನದೀಪ ಯೋಜನೆಯಡಿಯಲ್ಲಿ ಶಾಲೆಗೆ ಓರ್ವ ಶಿಕ್ಷಕರನ್ನು ನೇಮಕಾತಿಗೊಳಿಸಲಾಯಿತು. ಈ ಸಂದರ್ಭ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ದಿಸೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ.ಯೋ. ವತಿಯಿಂದ ಶಾಲೆಗೆ ಶಿಕ್ಷಕರನ್ನು ನೇಮಕಗೊಳಿಸುವಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರು, ತಾಲೂಕು ಯೋಜನಾಧಿಕಾರಿ ಮತ್ತು ಕಾನ್‍ಬೈಲ್ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಯಶೋಧ ಅವರಿಗೆ ಶಾಲೆಯ ಮುಖ್ಯೋಪಾದ್ಯಾಯನಿ ಶಾಂತಿ, ಸಹಶಿಕ್ಷಕರು, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಸಂಸ್ಥೆಯ ಸೇವೆಯನ್ನು ಶ್ಲಾಘಿಸಿದ್ದಾರೆ.










