ಕುಶಾಲನಗರ ಜು.10 NEWS DESK : ಕುಶಾಲನಗರ ಸಾಯಿ ಬಡಾವಣೆಯ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಗುರು ಪೂರ್ಣಿಮಾ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮುಂಜಾನೆ ದೇವರಿಗೆ ವಿಶೇಷ ಆರತಿ ಕಾರ್ಯಕ್ರಮಗಳು ಜರುಗಿದವು. ಕುಶಾಲನಗರ ದೇವಾಲಯಗಳ ಒಕ್ಕೂಟದ ಸಮಿತಿಯ ಪ್ರತಿನಿಧಿಗಳು ಫಲತಾಂಬೂಲಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಾಲಯದಲ್ಲಿ ಗಣಪತಿ ಹೋಮ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಸಾಯಿ ಬಾಬಾ ಮೂರ್ತಿ ಗೆ ಪೂಜೆ ಸಲ್ಲಿಸುವ ಮೂಲಕ ಅಷ್ಟ ಅಭಿಷೇಕ ಕಾರ್ಯಕ್ರಮ ಜರುಗಿತು. ದೇವಾಲಯ ಅರ್ಚಕರಾದ ನವೀನ್ ಕುಮಾರ್ ಶುಕ್ಲ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಕುಶಾಲನಗರದ ವಿವಿಧ ದೇವಾಲಯಗಳ ಪ್ರತಿನಿಧಿಗಳು ಭಕ್ತಾದಿಗಳು ಇದ್ದರು.











