ಮಡಿಕೇರಿ ಜು.11 NEWS DESK : ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿಶೇಷ ಸಭೆ ನಡೆಸಿದರು. ವಿರಾಜಪೇಟೆಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದಲ್ಲಿ ಇರುವ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ಷೇತ್ರದ್ಯಂತ ನಿರಂತರವಾಗಿ ಸಂಭವಿಸುತ್ತಿರುವ ಪ್ರಾಣಿ-ಮಾನವ ಸಂಘರ್ಷ, ಅರಣ್ಯ ಅಂಚಿನಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದು ಹಲವು ಸೂಚನೆಗಳನ್ನು ನೀಡಿದರು. ಈ ಸಂದರ್ಭ ರಾಜ್ಯ ವನ್ಯ ಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಹಿರಿಯ ಅರಣ್ಯ ಅಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.











