ಸೋಮವಾರಪೇಟೆ ಜು.11 NEWS DESK : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಸರಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಯೋಜನಾ ಕಛೇರಿಯಲ್ಲಿ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಹಾಗೂ ತಾಲೂಕಿನ ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ ಅವರು ವಿತರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ ಒದಗಿಸಲಾಗಿದೆ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ಪಾವತಿ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ ಹಾಗೂ ಕೇತ್ರದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ಕೊಡುಗೆಯ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 1 ಶಾಲೆಗೆ, ವಿರಾಜಪೇಟೆ ತಾಲೂಕಿನ 8 ಶಾಲೆಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ 6 ಶಾಲೆಗಗಳಿಗೆ ಒಟ್ಟು 15 ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು ತಿಳಿಸಿದರು. ಸೋಮವಾರಪೇಟೆ ತಾಲೂಕಿನ ಜ್ಞಾನದೀಪ ಶಿಕ್ಷಕರಾದ ಎ.ಎಲ್.ಶೀಲಾ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳ್ಳೂರು, ಟಿ.ಪಿ.ರಶ್ಮಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಕಿರಗಂದೂರು, ನಿತ್ಯ ವಿ.ಎನ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲುಗುಂದ, ಜಯಲಕ್ಷ್ಮೀ ಹೆಚ್ ಜೆ, ಸರಕಾರಿ ಹಿರಿಯ ಪ್ರಾಥಮಿಕಶಾಲೆ, 7ನೇ ಹೊಸಕೋಟೆ, ಮಾನಸ ಕೆ.ಎಂ, ಸರಕಾರಿ ಹಿರಿಯ ಪ್ರಾಥಮಿಕಶಾಲೆ, ಬಳಗುಂದ ಇವರಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ ಹಾಗೂ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ತಿತರಿದ್ದರು.










