Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶರಣ ಸಾಹಿತ್ಯ ಪರಿಷತ್ತಿನಿಂದ ಬಸವನಹಳ್ಳಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶರಣ ಸಾಹಿತ್ಯ ಪರಿಷತ್ತಿನಿಂದ ಬಸವನಹಳ್ಳಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ*

ಜುಲೈ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.11 NEWS DESK : ಹನ್ನೆರಡನೇ ಶತಮಾನದಲ್ಲಿ ಬೇರು ಬಿಟ್ಟಿದ್ದ ಮೇಲು ಕೀಳು, ವರ್ಣ ಬೇಧ, ವರ್ಗ ಬೇಧ, ಅಸಮಾನತೆ, ಬಡವ – ಬಲ್ಲಿದ, ಜಾತಿ ಪದ್ಧತಿಯ ನಿವಾರಣೆಯ ಭಾಗವಾಗಿ ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಹಡಪದ ಅಪ್ಪಣ್ಣ ಅವರನ್ನು ನೇಮಿಸುವ ಮೂಲಕ ಬಸವಣ್ಣನವರ ಬಳಿ ಬರುವ ಎಲ್ಲರೂ ಹಡಪದ ಅಪ್ಪಣ್ಣ ನವರ ಮೂಲಕವೇ ಭೇಟಿಯಾಗಬೇಕೆಂಬ ಆಶಯಕ್ಕೆ ಅನುಗುಣವಾಗಿ ಸತ್ಯ ಶುದ್ದ ಕಾಯಕ ಪ್ರಜ್ಞೆಯ ಹಡಪದ ಅಪ್ಪಣ್ಣ 114 ಕ್ಕೂ ಹೆಚ್ಚು ವಚನಗಳನ್ನು ರಚಿಸುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಳ ಜಾತಿಯವರನ್ನು ಕೀಳಾಗಿ ಕಾಣುತ್ತಾ ಮೂಢನಂಬಿಕೆ ಹಾಗೂ ಶೋಷಣೆಯನ್ನು ಬಿತ್ತುವ ಪುರೋಹಿತ ಶಾಹಿಗಳ ವಿರುದ್ಧ ಸಮರ ಸಾರಿದವರು ಅಪ್ಪಣ್ಣ. ವೃತ್ತಿಯಲ್ಲಿ ಕ್ಷೌರಿಕರಾದರೂ ಕೂಡ ನಡೆ ನುಡಿಗಳಲ್ಲಿ ಒಂದಾಗುವ ಮೂಲಕ ಸತ್ಯ ಶುದ್ದ ಕಾಯಕದಲ್ಲಿ ನಿರತರಾಗುತ್ತಿದ್ದ ಹಡಪದ ಅಪ್ಪಣ್ಣ ಅವರು, ಬಸವಣ್ಣನವರ ನಿಕಟವರ್ತಿಗಳಾಗಿದ್ದ ಬಗ್ಗೆ ಸವಿವರವಾಗಿ ಅವರ ಜೀವನ ಚರಿತ್ರೆಯನ್ನು ಮಹೇಂದ್ರಕುಮಾರ್ ಮಕ್ಕಳಿಗೆ ವಚನಗಳೊಂದಿಗೆ ವಿವರಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಧಾರ್ಮಿಕ ಪ್ರಭುತ್ವ ವಿರೋಧಿಸಿ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದ ಹೆಗ್ಗಳಿಕೆ ಬಸವಣ್ಣನ ಆಪ್ತ ಕಾರ್ಯದರ್ಶಿ ಹಡಪದ ಅಪ್ಪಣ್ಣ ನವರದ್ದಾಗಿದೆ.  ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಆಯ್ದಕ್ಕಿ ಲಕ್ಕಮ್ಮ, ಹಡಪದ ಅಪ್ಪಣ್ಣ, ಸತ್ಯಕ್ಕ, ಮುಕ್ತಾಯಕ್ಕಾ, ಅಕ್ಕಮಹಾದೇವಿ, ನೀಲಾಂಬಿಕೆ, ಸೂಳೆ ಸಂಕವ್ವೆ ಮೊದಲಾದ ಶಿವಶರಣರು ಪ್ರಾಚೀನ ಋಷಿಗಳ ಸಿದ್ಧಾಂತವಾದ ದೇಹವೇ ದೇವಾಲಯ ಹಾಗೂ ಕಾಯಕವೇ ಕೈಲಾಸ ಎಂದು ಸಮಾಜಕ್ಕೆ ಸಾರಿದ ಸತ್ಪುರುಷರು ಎಂದರು. ಬಸವನಹಳ್ಳಿ ಮೊರಾರ್ಜಿ ದೇಸಾಯಿ ಕಾಲೇಜಿನ ಪಿಯು ಉಪನ್ಯಾಸಕ ಕೆ.ಆರ್.ರಮೇಶ್ ಹಾಗೂ ಶಿವಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನ ಸಾಹಿತ್ಯವನ್ನು ಅರಿತರೆ ಅವರ ವ್ಯಕ್ತಿತ್ವಕ್ಕೆ ಹೊಳಪು ಬರುತ್ತದೆ. ವಚನ ಸಾಹಿತ್ಯದ ಜೊತೆಗೆ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಅಬ್ದುಲ್ ಕಲಾಂ ಮೊದಲಾದ ಮಹಾ ಪುರುಷರ ಜೀವನ ಚರಿತ್ರೆಗಳನ್ನು ಅಭ್ಯಸಿಸುವ ಮೂಲಕ ಮೇರು ಗುಣಗಳನ್ನು ಮೈಗೂಡಿಸಿಕೊಳ್ಳಲು ಕರೆಕೊಟ್ಟರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್, ವಸತಿ ಶಾಲೆಯ ಮೇಲ್ಬಿಚಾರಕ ಪ್ರವೀಣ್ ಇದ್ದರು. ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ…

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.