Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಲೈನ್‍ಮನೆಗಳಲ್ಲಿ ವಾಸಿಸುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ ಶೀಘ್ರ ಹಕ್ಕುಪತ್ರ ವಿತರಣೆ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಲೈನ್‍ಮನೆಗಳಲ್ಲಿ ವಾಸಿಸುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ ಶೀಘ್ರ ಹಕ್ಕುಪತ್ರ ವಿತರಣೆ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 NEWS DESK : ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ ರಹಿತರಿದ್ದು, ನಿವೇಶನ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಈಗಾಗಲೇ ಸರ್ಕಾರಿ ಜಾಗ ಗುರುತಿಸಲಾಗಿದೆ ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ, ಪೊನ್ನಂಪೇಟೆ, ಮಡಿಕೇರಿ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಗುರುತಿಸಲಾಗಿದೆ. ಎರಡು ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುವುದು. ನಿವೇಶನ ರಹಿತರು ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಕೋರಿದರು. ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಸಮಾಜದವರಿಗೆ ವೈಜ್ಞಾನಿಕವಾಗಿ ಪಟ್ಟಿ ತಯಾರಿಸಲಾಗಿದೆ. 61 ಎಕರೆ ಜಾಗವಿದ್ದು, ಗ್ರಾಮ ಸಭೆಯಲ್ಲಿ ಸಹ ಪರಿಶೀಲಿಸಿ ಪಟ್ಟಿ ಆಯ್ಕೆ ಮಾಡಲಾಗುತ್ತದೆ. ಆಯಾಯ ಗ್ರಾ.ಪಂ.ಯಲ್ಲಿ ಕುಟುಂಬಗಳು ನೋಂದಣಿ ಮಾಡಿಕೊಳ್ಳಬೇಕು. ಇದೊಂದು ಅಭಿಯಾನ ಮಾದರಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದರು. ಆರ್ಥಿಕವಾಗಿ ಬಡ ಕುಟುಂಬದವರಿಗೆ ನಿವೇಶನ ಒದಗಿಸಬೇಕು ಎಂಬುದು ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬುಡಕಟ್ಟು ಪರಿಶಿಷ್ಟರಿಗೆ ನಿವೇಶನ ನೀಡಲು ಮುಂದಾಗಲಾಗಿದೆ ಎಂದರು. ಜಿಲ್ಲಾಧಿಕಾರಿಯವರು, ಜಿ.ಪಂ.ಸಿಇಒ ತಹಶೀಲ್ದಾರರು, ತಾ.ಪಂ.ಇಒ ಇವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ ಎಂದು ಹೇಳಿದರು. ಜಿಲ್ಲೆಯ ಬಡವರು ತಾವುಗಳೇ ಹೋಗಿ ಎಲ್ಲಿಯೂ ಸಹ ಶೆಡ್ ನಿರ್ಮಾಣ ಮಾಡಬಾರದು. ಜಾಗ ಗುರುತಿಸಿ ನಿವೇಶನ ಹಂಚಿಕೆ ಮಾಡಲಾಗುವುದು. ಆದ್ದರಿಂದ ತಾಳ್ಮೆಯಿಂದ ಇರಬೇಕು ಎಂದರು. ಜಿಲ್ಲೆಯಲ್ಲಿ ವನ್ಯಪ್ರಾಣಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಹುಲಿ, ಕರಡಿ, ಕಾಡಾನೆ ವನ್ಯಪ್ರಾಣಿಗಳ ಹಾವಳಿ ತಡೆಯಲು ವಿಶೇಷ ಕ್ಷಿಪ್ತಪಡೆ ರಚಿಸಲಾಗಿದ್ದು, ಈ ತಂಡವು ಕಾಡಾನೆಗಳನ್ನು ಓಡಿಸುವ ಕೆಲಸ ಮಾಡಲಿದ್ದಾರೆ ಎಂದರು. ಎಲ್ಲಾ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಗುರುವಾರ ದಿಂದ ಆರಂಭವಾಗಿದೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿರುವ ನಾಲ್ಕು ಹುಲಿಗಳನ್ನು ಹಿಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಪಿ.ಕೆ.ಪೊನ್ನಪ್ಪ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ…

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.