ಬೆಂಗಳೂರು ಜು.14 NEWS DESK : ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಜನ ಮೃತಪಟ್ಟಿದ್ದ ದುರಂತದ ತನಿಖೆಗಾಗಿ, ಸರಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಡಿ’ಕುನ್ಹ ಅವರು ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಇತರರು ಉಪಸಿತರಿದ್ದರು.











