ವಿರಾಜಪೇಟೆ ಜು.14 NEWS DESK : ವಿರಾಜಪೇಟೆಯಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ವಿದ್ಯಾರ್ಥಿಗಳ ಜೀವನವನ್ನು ರೂಪಿಸುವಲ್ಲಿ ಕಾಲೇಜು ಹಂತ ಮಹತ್ತರ ಪಾತ್ರವನ್ನು ವಹಿಸುತ್ತದೆ. ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪರಿಪಾಲನೆಯನ್ನು ರೂಢಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕೆಂದು ಕಿವಿ ಮಾತನ್ನು ಹೇಳಿದರು. ವಿದ್ಯಾರ್ಥಿನಿ ಭೂಮಿಕಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಕೃತಿ ಸ್ವಾಗತಿಸಿದರು. ಡೋನಾ ನಿರೂಪಿಸಿದರು. ಪ್ರತೀಕ್ಷಾ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.












