Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು : ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭ* 
ಇತ್ತೀಚಿನ ಸುದ್ದಿಗಳು

*ಪುತ್ತೂರು : ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭ* 

July 14, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಜು.14 NEWS DESK : ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಡೆಸಲ್ಪಡುವ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು 2001ನೇ ಇಸವಿಯಲ್ಲಿ ಪ್ರಾರಂಭಗೊಂಡಿದ್ದು 25ನೇ ವರ್ಷದತ್ತ ದಾಪುಗಾಲಿಡುತ್ತಿದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ  ಶಿಕ್ಷಣವನ್ನು ನೀಡುವ ಮಹತ್ವಾಕಾಂಕ್ಷಿ ಯೋಜನೆಯೊಂದಿಗೆ ಪ್ರಾರಂಭವಾದ ಈ ಸಂಸ್ಥೆ ಇಂದು ಕರಾವಳಿ ಭಾಗದ ಪ್ರತಿಷ್ಟಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ನಡೆದ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎಲ್ಲರೂ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶೇ.100 ರಷ್ಟು ಫಲಿತಾಂಶವನ್ನು ಗಳಿಸಿಕೊಂಡಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಇದುವರೆಗೆ ಒಟ್ಟು 27 ರ್ಯಾಂಕುಗಳನ್ನು ಗಳಿಸಿಕೊಂಡಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಡಾಟಾ ಸೈನ್ಸ್ ವಿಭಾಗದ 4 ವಿದ್ಯಾರ್ಥಿಗಳು, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 2 ವಿದ್ಯಾರ್ಥಿಗಳು ಹಾಗೂ ಆರ್ಟಿಫೀಷಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಓರ್ವ ವಿದ್ಯಾರ್ಥಿ ಅತ್ಯುನ್ನತ ಸಾಧನೆಯೊಂದಿಗೆ ಒಟ್ಟು 7 ರ್ಯಾಂಕ್‍ಗಳನ್ನು ಮತ್ತು ಒಂದು ಚಿನ್ನದ ಪದಕವನ್ನು ಗಳಿಸಿಕೊಂಡಿದ್ದು ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಪ್ರಾರಂಭದ ದಿನದಿಂದ ಇದುವರೆಗೆ ಒಟ್ಟು 6163 ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಹಾಗೂ 770 ವಿದ್ಯಾರ್ಥಿಗಳು ಎಂಬಿಎ, ಎಂಸಿಎ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಕೇಂದ್ರ, ರಾಜ್ಯ ಸರ್ಕಾರದ ಮತ್ತು ಕಾರ್ಪೊರೇಟ್ ಜಗತ್ತಿನ ವಿವಿಧ ಮಜಲುಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಭಾರತೀಯ ಸೇನೆ, ಭಾರತೀಯ ನಾಗರಿಕ ಸೇವೆ, ಬ್ಯಾಂಕಿಂಗ್, ಕಾನೂನು, ಶೈಕ್ಷಣಿಕ ವ್ಯವಸ್ಥೆ, ಸಾಫ್ಟ್‍ವೇರ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.. ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಉನ್ನತ ಹುದ್ದೆಯನ್ನು ಗಳಿಸಿಕೊಂಡು ಜೀವನವನ್ನು ಸುಭದ್ರಗೊಳಿಸಿಕೊಂಡಿದ್ದಾರೆ.  ಈ ವರ್ಷ ಅನೇಕ ಕಂಪೆನಿಗಳು ಕಾಲೇಜಿಗೆ ಕ್ಯಾಂಪಸ್ ನೇಮಕಾತಿಗಾಗಿ ಆಗಮಿಸಿದ್ದು, 250 ಕ್ಕೂ ಮಿಕ್ಕಿ ಅರ್ಹ ವಿದ್ಯಾರ್ಥಿಗಳು ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಕೆಲ ಪ್ರತಿಭಾವಂತ ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚು ಕಂಪೆನಿಗಳಲ್ಲಿ ಆಯ್ಕೆಗೊಂಡಿದ್ದಾರೆ. ಗರಿಷ್ಟ 15 ಲಕ್ಷಗಳ ವಾರ್ಷಿಕ ವೇತನದ ಜತೆಗೆ ಸರಾಸರಿ 5 ಲಕ್ಷ ರೂಗಳ ವೇತನದ ಹುದ್ದೆಗಳಿಗೆ ನಮ್ಮ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದು ಇದು ಕಾರ್ಪೊರೇಟ್ ಜಗತ್ತಿನೊಂದಿಗಿನ ಸಂಪರ್ಕ ಮತ್ತು ಕಾಲೇಜಿನಲ್ಲಿ ನೀಡುತ್ತಿರುವ ತರಬೇತಿಯ ಗುಣಮಟ್ಟಕ್ಕೆ ನಿದರ್ಶನವಾಗಿದೆ. ಇಂಡಸ್ಟ್ರಿಗಳು ಬಯಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸುವ ನಿಟ್ಟಿನಲ್ಲಿ ಕಾಲೇಜು ಅನೇಕ ಸಂಸ್ಥೆಗಳೊಂದಿಗೆ ತಿಳುವಳಿಕೆಯ ಒಪ್ಪಂದವನ್ನು ಮಾಡಿಕೊಂಡಿದ್ದು, ಸೆಂಟರ್ ಆಫ್ ಎಕ್ಸಲ್ಲೆನ್ಸ್ ಕೇಂದ್ರಗಳನ್ನೂ ತೆರೆಯಲಾಗಿದೆ. ಪ್ರಾಜೆಕ್ಟ್ ಟೂ ಪ್ರಾಡಕ್ಟ್ ಎನ್ನುವ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳಿಗೆ ಮೂರ್ತಸ್ವರೂಪವನ್ನು ನೀಡಿ ಅದನ್ನೊಂದು ಉತ್ಪನ್ನವನ್ನಾಗಿಸುವ ನಿಟ್ಟಿನಲ್ಲಿ ಕಾಲೇಜು ಸಹಕಾರವನ್ನು ನೀಡುತ್ತಿದ್ದು, ಸ್ಟಾರ್ಟಪ್‍ಗಳನ್ನು ಪ್ರಾರಂಭಿಸುವವರಿಗೆ ಸೂಕ್ತ ಸವತ್ತುಗಳನ್ನು ಒದಗಿಸುವಲ್ಲಿ ನಿರತವಾಗಿದೆ. ತಾಂತ್ರಿಕ ಶಿಕ್ಷಣದ ಜತೆಯಲ್ಲಿ ನೈತಿಕ ಶಿಕ್ಷಣವನ್ನೂ ಇಲ್ಲಿ ನೀಡಲಾಗುತ್ತಿದ್ದು, ಕಾಲೇಜಿನಿಂದ ಹೊರಬಂದ ಪದವೀಧರರು ಸಮಾಜದ ಸತ್ಪ್ರಜೆಗಳಾಗಿ ಜೀವನವನ್ನು ನಡೆಸಲು ಅಗತ್ಯವಾದ ಜೀವನ ಮೌಲ್ಯಗಳನ್ನು ತಿಳಿಸಲಾಗುತ್ತದೆ. ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಇಲ್ಲಿ ಸಾಕಷ್ಟು ಪ್ರೋತ್ಸಾಹವನ್ನು ನೀಡಲಾಗುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಸತತ 3 ಬಾರಿ ಚಾಂಪಿಯನ್‍ಗಳಾಗಿ ಹೊರಹೊಮ್ಮಿದ್ದಾರೆ. ಇದಲ್ಲದೆ ಆಟೋಟ ಸ್ಪರ್ಧೆಗಳಲ್ಲೂ ಅನೇಕ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಇಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳು ಅಂತರ್ ವಿಶ್ವವಿದ್ಯಾನಿಲಯ ಸ್ಪರ್ಧೆಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು  ಪ್ರತಿನಿಧಿಸಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮಾಡಿದ್ದು, ಇತ್ತೀಚಿಗೆ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ 2 ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಪಡೆದುಕೊಂಡು ಉನ್ನತ ಸಾಧನೆಯನ್ನು ಮಾಡಿದ್ದಾರೆ. IEEE ವಿದ್ಯಾರ್ಥಿ ವಿಭಾಗದ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ತಾಂತ್ರಿಕ ಚಟುವಟಿಕೆಗಳನ್ನು ನಡೆಸುವುದರ ಜತೆಯಲ್ಲಿ ಅವರ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶವನ್ನು ನೀಡಲಾಗುತ್ತದೆ. ಕಾಲೇಜಿನ NSS ಮತ್ತು Youth Red Cross ಸಂಘಗಳ ಮೂಲಕ ಅನೇಕ ಸಮಾಜಮುಖೀ ಚಟುವಟಿಕೆಗಲನ್ನು ನಡೆಸಲಾಗುತ್ತದೆ. ಗ್ರಾಮವಿಕಾಸ ಯೋಜನೆಯಡಿ ಕುಳ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಸಹಕಾರವನ್ನು ನೀಡಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ 5 ಇಂಜಿನಿಯರಿಂಗ್ ಪದವಿ ವಿಭಾಗಗಳು ಮತ್ತು 2 ಸ್ನಾತಕೋತ್ತರ ಪದವಿ ವಿಭಾಗಗಳಿವೆ. ಕಂಪ್ಯೂಟರ್ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್, ಡಾಟಾ ಸೈನ್ಸ್, ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಸನ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿಭಾಗಗಳು, ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಪದವಿ ವಿಭಾಗಗಳಿವೆ. ಪ್ರಸಕ್ತ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು ಮ್ಯಾನೇಜ್‍ಮೆಂಟು ಸೀಟುಗಳು ಈಗಾಗಲೇ ಭರ್ತಿಯಾಗಿವೆ. ಸಿಇಟಿ ಮೂಲಕ ದಾಖಲಾತಿ ಹೊಂದುವವರು ಕಾಲೇಜಿನ ಸಿಇಟಿ ಸಂಖ್ಯೆ ಇ 121 ನ್ನು ಬಳಸಿಕೊಂಡು ತಮಗೆ ಬೇಕಾದ ಸೀಟುಗಳನ್ನು ಆಯ್ಕೆಮಾಡಿಕೊಳ್ಳಬಹುದು.  ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದಾಖಲಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಮೊಬೈಲ್ ಸಂಖ್ಯೆ- 9845065506 ಇವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಸಿಎನ್‍ಸಿ ಸಂತಾಪ*
Next Article *ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ : 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.