ವಿರಾಜಪೇಟೆ ಜು.14 NEWS DESK : ಅಗ್ನಿ ಅವಘಡದಿಂದ 2 ಮನೆಗಳಿಗೆ ಹಾನಿಯಾಗಿರುವ ಘಟನೆ ವಿರಾಜಪೇಟೆಯ ಮುಖ್ಯ ರಸ್ತೆಯ ಶ್ರೀ ಗಣಪತಿ ದೇವಾಲಯದ ಹಿಂಭಾಗದಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಆದರೆ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿತು.










