Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *500 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳ ಉಚಿತ ಪ್ರಯಾಣ : ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆ ಸಂಭ್ರಮಾಚರಣೆ*
ಇತ್ತೀಚಿನ ಸುದ್ದಿಗಳು

*500 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳ ಉಚಿತ ಪ್ರಯಾಣ : ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆ ಸಂಭ್ರಮಾಚರಣೆ*

July 14, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.14 NEWS DESK : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಹಾಗೂ ಮೊದಲ ಕಾರ್ಯಕ್ರಮವಾದ ‘ಶಕ್ತಿ’ ಯೋಜನೆಯಡಿ 500 ಕೋಟಿಗೂ ಹೆಚ್ಚಿನ ಮಹಿಳೆಯರು ರಾಜ್ಯ ಸರ್ಕಾರಿ ಸಂಸ್ಥೆಯ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸಿರುವ ಹಿನ್ನೆಲೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಯಿತು.   ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಅಲಂಕೃತಗೊಳಿಸಲಾಗಿದ್ದ ಬಸ್‍ಗೆ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್ ಅವರು ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಹಾಗೂ ನೆರೆದಿದ್ದವರಿಗೆ ಸಿಹಿ ವಿತರಿಸಿ ಸಂತಸ ಹಂಚಿಕೊಂಡರು. ಪಂಚ ಗ್ಯಾರಂಟಿ ಯೋಜನೆಯನ್ನು ಸರ್ಕಾರ ಕಳೆದ 2023 ರ ಜೂನ್, 11 ರಂದು ಜಾರಿಗೊಳಿಸಿದ್ದು, ಈ ಹಿನ್ನೆಲೆ 500 ಕೋಟಿಗೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಕೆಎಸ್‍ಆರ್‍ಟಿಸಿ ಬಸ್ ಉಚಿತ ಸೌಲಭ್ಯವನ್ನು ಪಡೆದಿರುವ ಹಿನ್ನೆಲೆ ಬಸ್ ನಿಲ್ದಾಣದಲ್ಲಿ ನೆರೆದಿದ್ದವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಶಕ್ತಿ ಯೋಜನೆ ಸಂಬಂಧಿಸಿದ ಸಾಧನೆ ಬಿಂಬಿಸುವ ಪ್ಲೆಕ್ಸ್‍ಗಳನ್ನು ಬಸ್ ನಿಲ್ದಾಣದ ಆವರಣದಲ್ಲಿ ಅಳವಡಿಸಲಾಗಿತ್ತು. ಹಲವು ಮಹಿಳೆಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡುಬಂದೀತು. ಬಳಿಕ ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್ ಅವರು ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದು, ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದರು. ನಾಡಿನ ಮಹಿಳೆಯರ ಸ್ವಾವಲಂಬನೆ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಇದು ಗ್ಯಾರಂಟಿ ಯೋಜನೆ ಯಶಸ್ವಿಗೆ ಹಿಡಿದ ಕೈಗನ್ನಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  ಶಕ್ತಿ ಯೋಜನೆ ಜಾರಿಯಾದ ನಂತರ ಈವರೆಗೆ 500 ಕೋಟಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‍ನಲ್ಲಿ ಪ್ರಯಾಣ ಮಾಡಿದ್ದು, ಇವರಿಗೆ ಒಟ್ಟು 12,000 ಕೋಟಿ ರೂ. ಟಿಕೇಟ್ ಮೌಲ್ಯ ದಾಟಿದೆ ಎಂದು ತಿಳಿಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರಾ ಮೈನಾ ಮಾತನಾಡಿ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿರುವ ಹಿನ್ನೆಲೆ ಒಂದು ರೀತಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ ಎಂದರು.  ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯವಾಗಿದ್ದು, ಒಂದು ರೀತಿ ಹೆಮ್ಮೆಯಿದೆ. ಶಕ್ತಿ ಯೋಜನೆಯು ಪ್ರತಿ ಮಹಿಳೆಯರ ಕನಸುಗಳನ್ನು ನನಸಾಗಿಸಿ, ನಿಜಾರ್ಥದಲ್ಲಿ ಅವರ ಬದುಕಿಗೆ ಶಕ್ತಿ ತುಂಬಿದೆ ಎಂದು ತೆನ್ನೀರ ಮೈನಾ ನುಡಿದರು. ಕೆಎಸ್‍ಆರ್‍ಟಿಸಿ ವಾಹನ ಚಾಲಕರು ಮತ್ತು ನಿರ್ವಾಹಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 2023 ರ ಜೂನ್ ತಿಂಗಳಿನಿಂದ ಇದುವರೆಗೆ 1.21 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಸದಸ್ಯರಾದ ಪ್ರಭು ರೈ, ರಾಜೇಶ್ವರಿ, ಫ್ಯಾನ್ಸಿ ಪಾರ್ವತಿ, ಶೀರಾಜ್, ರಘು, ಇಬ್ರಾಹಿಂ, ದಯಾನಂದ, ರಂಗಪ್ಪ, ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಉದಯಕುಮಾರ್, ಪ್ರಕಾಶ್ ಆಚಾರ್ಯ, ತಾ.ಪಂ.ಇಒ ಶೇಖರ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮುತ್ತಾರ್ಮುಡಿಯಲ್ಲಿ ಗಮನ ಸೆಳೆದ ಬೇಲ್‍ರ ಕೋಯಿಮೆ ಕಾರ್ಯಕ್ರಮ : ಭತ್ತ ಕೃಷಿಗೆ ಹೆಚ್ಚಿನ ಒತ್ತು ನೀಡಿ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಸಲಹೆ*
Next Article *ಮಡಿಕೇರಿ : ಜು.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.