ನವದೆಹಲಿ NEWS DESK ಜು.15 : ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು. ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಗೃಹ ಸಚಿವರಿಗೆ ತಿಳಿಸಿದರು. ಈ ವಿಷಯದ ಕುರಿತು ಗೃಹ ಸಚಿವಾಲಯದಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಎಲ್ಲಾ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್ ಶಾ ಅವರು ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.











