Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ : ಡಿಡಿಪಿಐ ರಂಗಧಾಮಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ : ಡಿಡಿಪಿಐ ರಂಗಧಾಮಪ್ಪ*

ಜುಲೈ 15, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜು.15 NEWS DESK : ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ( ಅಭಿವೃದ್ಧಿ) ಸಿ.ರಂಗಧಾಮಪ್ಪ ಸೋಮವಾರ ಮನವಿ ಮಾಡಿದರು. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ನೂತನವಾಗಿ ಸೋಮವಾರ ಆರಂಭಿಸಲಾದ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.  ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರವು ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿ ಆರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗ ಒಟ್ಟು 74 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದರು. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ಡಿಡಿಪಿಐ ರಂಗಧಾಮಪ್ಪ ಮನವಿ ಮಾಡಿದರು. ಆಂಗ್ಲ ಮಾಧ್ಯಮ ಶಿಕ್ಷಣ ಕಲಿಕಾ ತರಗತಿಗೆ ಚಾಲನೆ ನೀಡಿ ಮಾತನಾಡಿದ ಶಿಕ್ಷಣ ಪ್ರೇಮಿಯೂ ಆದ ಕೂಡ್ಲೂರು ಗ್ರಾಮದ ಪ್ರವಾಸೋದ್ಯಮಿ ಕೆ.ಕೆ.ಮಂಜುನಾಥ್ ಕುಮಾರ್,  ರಾಜ್ಯ ಸರ್ಕಾರವು ಈ ಶಾಲೆಯು ಸೇರಿದಂತೆ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 4, 134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದರು. ಈ ಶಾಲೆಯ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ಕುಶಾಲನಗರ ತಾಲ್ಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿಗೆ ಸೂಕ್ತ ಅನುದಾನ ನೀಡಲಿದೆ ಎಂದರು.
ಆಂಗ್ಲ ಮಾಧ್ಯಮ ಶಿಕ್ಷಣ ಹಣವುಳ್ಳವರ ಮೊದಲು ಕೆಲವರ ಸ್ವತ್ತಾಗಿತ್ತು. ಈಗ ಕಾಲ ಬದಲಾಗಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶಗಳ ಬಡ ಕೂಲಿ ಕಾರ್ಮಿಕರ ಮಕ್ಕಳು ಕೂಡ‌ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಮಂಜುನಾಥ್ ಕುಮಾರ್ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮ ಉತ್ತಮವಾದುದ್ದು. ಸೋಮವಾರಪೇಟೆ ತಾಲ್ಲೂಕಿನಲ್ಲಿ 15 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸರ್ಕಾರ
ಅನುಮತಿ ನೀಡಿದೆ. ಇದು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಇಂಗ್ಲೀಷ್ ಕಲಿಯುವ ಯೋಗ ಮತ್ತು ಉತ್ತಮ ಅವಕಾಶ ಲಭಿಸಿರುವುದು ಸಂತಸಕರವಾದುದು. ಈ ಶಾಲೆಯು ಉತ್ತಮವಾಗಿ ಬೆಳೆಯಲಿ. ಈಗ ಶಾಲೆಯಲ್ಲಿಆಂಗ್ಲ ಮಾಧ್ಯಮ ಆರಂಭಿಸುತ್ತಿರುವ ಕುರಿತು ಸ್ಥಳೀಯವಾಗಿ
ಜಾಗೃತಿ ಮೂಡಿಸಿದರೆ ಶಾಲೆಗೆ ಹೆಚ್ಚು ಮಕ್ಕಳನ್ನು ದಾಖಲಿಸಲು ಸಾಧ್ಯ ಎಂದರು. ಆಂಗ್ಲ ಮಾಧ್ಯಮ ಬೋಧಿಸುವ ಶಿಕ್ಷಕರಿಗೆ ಉತ್ತಮ ತರಬೇತಿ ನೀಡಲಾಗುತ್ತಿದೆ ಎಂದರು. ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಕ್ಕೆ ಶಾಸಕರಿಂದ ಉತ್ತಮ ಸಹಕಾರ, ಪ್ರೋತ್ಸಾಹ ಸಿಗುತ್ತಿದೆ ಎಂದು ಬಿಇಓ ಭಾಗ್ಯಮ್ಮ ತಿಳಿಸಿದರು. ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು ತುಂಬಾ ಸಂತಸ ಮತ್ತು ಖುಷಿ ತಂದಿದೆ ಎಂದರು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಮನವಿ ಮಾಡಿದರು. ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ
ಗ್ರಾಮ ಪಂಚಾಯತಿ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದು ಭಾಸ್ಕರ್ ನಾಯಕ್ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಗ್ರಾಮಾಂತರ ಪ್ರದೇಶದ ನಮ್ಮ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಈ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ , ತಮ್ಮ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಕರಿಸಿವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸಿ.ಆರ್.ಪಿ., ಕೆ.ಶಾಂತಕುಮಾರ್, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ
ಕುರಿತು ಮಾಹಿತಿ ನೀಡಿದರು. ಮಂಡಲ ಪಂಚಾಯತಿ ಮಾಜಿ ಪ್ರಧಾನ ಕೆ.ಎಸ್.ರಾಜಾಚಾರಿ ಮಾತನಾಡಿ,ತಮ್ಮ ಗ್ರಾಮದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಿದ್ದಕ್ಕೆ ಇಲಾಖಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ ಶಾಲೆಯ ಅಭಿವೃದ್ಧಿಗೆ ಗ್ರಾಮದ ವತಿಯಿಂದ ಸಹಕರಿಸುವುದಾಗಿ ತಿಳಿಸಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಗ್ರಾ.ಪಂ.ಪಿಡಿಓ ಎಂ.ಆರ್. ಸಂತೋಷ್,
ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ ,ಅರ್ಪಿತ , ಯಮುನ, ಸುಮತಿ, ಪ್ರಾಥಮಿಕ ಶಾಲೆಯ ಶಿಕ್ಷಕರು, ಪೋಷಕರು
ವಿದ್ಯಾರ್ಥಿಗಳು ಇದ್ದರು. ಸಿ.ಆರ್.ಪಿ., ಕೆ.ಶಾಂತಕುಮಾರ್ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.