ಮಡಿಕೇರಿ ಜು.15 NEWS DESK : ನಾಪೋಕ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ಮತ್ತು ನಾಪೋಕ್ಲು ಠಾಣೆಯ ಪಿಎಸ್ಐ ರಾಘವೇಂದ್ರ ಮನೆ ಮನೆಗೆ ಭೇಟಿ ನೀಡಿ ಕಾರ್ಯಕ್ರಮದ ಉದ್ದೇಶ ಮತ್ತು ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯಿದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭ ಠಾಣೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.










