ಸುಂಟಿಕೊಪ್ಪ ಜು.15 NEWS DESK : ಸುಂಟಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ 2025-26ನೇ ಸಾಲಿಗೆ ಶೈಕ್ಷಣಿಕ ಸಂಸತ್ ಮಂತ್ರಿ ಮಂಡಲ ಶಾಲಾ ನಾಯಕನಾಗಿ ಅಜಿತ್, ಉಪನಾಯಕಿ ವೈಷ್ಣವಿ, ಆಹಾರ ಮಂತ್ರಿಯಾಗಿ ರಿದಾ ಮರಿಯಮ್, ಆಹಾರ ಉಪಮಂತ್ರಿಯಾಗಿ ನಿಶ್ಮಿತಾ, ರಂಜಿತ, ಆರೋಗ್ಯ ಮಂತ್ರಿಯಾಗಿ ಮೊಹಮ್ಮದ್ ಶಹಬಾಸ್, ಆರೋಗ್ಯ ಉಪಮಂತ್ರಿಯಾಗಿ ರೆಹನತ್, ಸ್ಚಚ್ಚತಾ ಮಂತ್ರಿ ಹಾಗೂ ಶಾಲಾ ಭದ್ರತಾ ಸಮಿತಿ ಮಂತ್ರಿಯಾಗಿ ಲೇಖಿಕ್, ಉಪ ಮಂತ್ರಿಯಾಗಿ ಅರ್ಪಿತ ರಾಡ್ರಿಗಸ್, ಕ್ರೀಡಾಮಂತ್ರಿಯಾಗಿ ಶಶಿಕಾಂತ, ಉಪಮಂತ್ರಿಯಾಗಿ ಸೃಜನ, ಸಾಂಸ್ಕೃತಿಕ ಮತ್ತು ವಾರ್ತಾ ಮಂತ್ರಿಯಾಗಿ ದೀಕ್ಷಾ, ವಾರ್ತಾ ಉಪಮಂತ್ರಿಯಾಗಿ ನೌಶಿನ ಅವರುಗಳಿಗೆ ಪ್ರಮಾಣ ವಚನ ಬೋಧಿಸುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು. ಇದೇ ಸಂದರ್ಭ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಸಿ.ಟಿ.ಸೋಮಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಬಾಲಕೃಷ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಿಲ್ ರಾಡ್ರಿಗಸ್, ಸಹಶಿಕ್ಷಕರುಗಳು ಹಾಗೂ ಸಿಬ್ಬಂದಿಗಳು ಇದ್ದರು.










