ಮಡಿಕೇರಿ ಜು.24 NEWS DESK : ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ತಡೆಗೋಡೆಯನ್ನು ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಪರಿಶೀಲಿಸಿದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಅರಕಲಗೂಡು ಶಾಸಕ ಎ.ಮಂಜು, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.











