Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಯ ತೇಜೋವಧೆ ಸಲ್ಲದು : ಜಿ.ಚಿದ್ವಿಲಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಯ ತೇಜೋವಧೆ ಸಲ್ಲದು : ಜಿ.ಚಿದ್ವಿಲಾಸ್*

ಜುಲೈ 24, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.24 NEWS DESK : ಪತ್ರಕರ್ತರು ಸಮಾಜದ ಆಗುಹೋಗುಗಳ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಸಮಾಜದ ಕಣ್ಗಾವಲಾಗಿ ಕಾರ್ಯನಿರ್ವಹಿಸಬೇಕೆಂದು ಶಕ್ತಿ ಸಂಪಾದಕ ಜಿ.ಚಿದ್ವಿಲಾಸ್ ಕರೆ ನೀಡಿದರು. ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿವಿ ಹಿತರಕ್ಷಣಾ ಸಮಿತಿ ವತಿಯಿಂದ ವಿವಿಯ ಹಾರಂಗಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡಗು ವಿವಿ ಉಳಿವಿನ ಬಗ್ಗೆ ಸರ್ಕಾರ ಇದೂವರೆಗೂ ತನ್ನ ನಿಲುವು ಪ್ರಕಟಪಡಿಸದ ಹಿನ್ನೆಲೆಯಲ್ಲಿ ಶಾಸಕರು ಈ ಬಗ್ಗೆ ವಿವಿಯೊಂದಿಗೆ ಗಟ್ಟಿಯಾಗಿ ನಿಲ್ಲುವ ಮೂಲಕ ಖಾಸಗಿ ಸಂಸ್ಥೆಗಳು ನೀಡಬಹುದಾದ ಅನುದಾನಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ಸಾಮಾಜಿಕ ಜಾಲತಾಣಗಳು ಯಾವುದೇ ವ್ಯಕ್ತಿಯನ್ನು ಕಠಿನ ಶಬ್ಧಗಳಿಂದ ತೇಜೋವಧೆ ಮಾಡುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಕೆಲಸ ಆಗಬಾರದು. ಮಾಧ್ಯಮಗಳಿಂದಾಗಿ ಹೊಸ ಪ್ರತಿಭೆಗಳು ಹೊಸ ಚಿಂತನೆಗಳ ಉಗಮವಾಗುತ್ತಿದೆ ಎಂದು ಶ್ಲಾಘಿಸಿದರು. ಯುವ ಜನಾಂಗ ಇಂದು ಸಮಾಜದಲ್ಲಿ ಅನೈತಿಕ ಚಟುವಟಿಕೆಗಳು ಹಾಗೂ ಕ್ರೌರ್ಯದತ್ತ ಮುಖ ಮಾಡುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಚಿದ್ವಿಲಾಸ್, ಮೊಬೈಲ್ ಗಳ ಬಳಕೆ ಎಲ್ಲರಿಗೂ ಜೀವನದ ಅವಿಭಾಜ್ಯ ವಾಗಿರುವ ಈ ಹೊತ್ತಿನಲ್ಲಿ ನಾವು ಹಿಂದಿನ ಪೂರ್ವಜರು ಯಾವುದೇ ದುರಾಸೆಗಳಿಗೂ ಒಳಗಾಗದೇ ಸಂತೃಪ್ತ ಬದುಕನ್ನು ಕಟ್ಟಿದ್ದನ್ನು ನಾವು ಅವಲೋಕಿಸಬೇಕಿದೆ ಎಂದು ವಿಶ್ಲೇಷಿಸಿದರು. ಡಿಜಿಟಲೀಕರಣದಿಂದಾಗಿ ಸ್ಥಳೀಯ ಪತ್ರಿಕೆಗಳಿಗೆ ಧಕ್ಕೆಯಾಗದಿದ್ದರೂ ಕೂಡ ದೊಡ್ಡ ದೊಡ್ಡ ಮುದ್ರಣ ಮಾಧ್ಯಮಕ್ಕೆ ಧಕ್ಕೆಯಾಗುತ್ತಿರುವ ಬಗ್ಗೆ ಚಿದ್ವಿಲಾಸ್ ಅವಲೋಕಿಸಿದರು. ಇಂದು ವಿದ್ಯಾರ್ಥಿಗಳು ಹಾಗೂ ಯುವಜನಾಂಗ ಐಟಿ ಕಂಪೆನಿಗಳಿಗೆ ಹೋಗುವ ಆಲೋಚನೆ ಬಿಟ್ಟು ಕೃಷಿ, ಕೋಳಿ ಸಾಕಣೆ, ಹೈನುಗಾರಿಕೆ, ಅಣಬೆ ಬೇಸಾಯ, ವ್ಯಾಪಾರ ಹಾಗೂ ಬೇರೆ ಬೇರೆ ಕಾರ್ಯಕ್ಷೇತ್ರಗಳತ್ತ ತೊಡಗಿಸಿಕೊಂಡು ಸ್ವಯಂ ಉದ್ಯೋಗ ಕಂಡುಕೊಳ್ಳಲು ಕಿವಿ ಮಾತು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಾ.ಮಂತರಗೌಡ ಮಾತನಾಡಿ, ಮಾಧ್ಯಮ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ.
ಮಾಧ್ಯಮ ರಾಜಕಾರಣಿಗಳನ್ನು ಟೀಕಿಸಿದಷ್ಟು ಎಚ್ಚೆತ್ತುಕೊಳ್ಳಲು ಅನುಕೂಲವಾಗುತ್ತದೆ. ಸಾಮಾಜಿಕ ಜಾಲತಾಣಗಳಿಂದ ಪ್ರಿಂಟ್ ಮೀಡಿಯಾ ಕಳೆಗುಂದಬಾರದು. ವ್ಯವಸ್ಥೆಯ ಮೇಲಿನ ಕೆಲವು ಏರು ಪೇರುಗಳಿಗೆ ಆರೋಗ್ಯಕಾರಿ ಟೀಕೆ – ಟಿಪ್ಪಣಿಗಳು ಮಾಧ್ಯಮದಲ್ಲಿರಬೇಕು ಎಂದು ಆಶಿಸಿದ ಶಾಸಕರು ಕಾಲೇಜು ವಿದ್ಯಾರ್ಥಿಗಳು ಮುಕ್ತವಾಗಿ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಮಾಧ್ಯಮ ವೇದಿಕೆಯಾಗಬೇಕಿದೆ. ಹಾಗೆಯೇ
ದಿನಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ಕೊಡಗು ವಿವಿ ಉಳಿಸುವ ಹೋರಾಟದಲ್ಲಿ ಪತ್ರಕರ್ತರ ಕಾರ್ಯವನ್ನು ಇದೇ ಸಂದರ್ಭ ಶಾಸಕರು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೊಡಗು ವಿವಿ ಹೋರಾಟದ ವಿಚಾರದಲ್ಲಿ ಕೊಡಗಿನ ಮಾಧ್ಯಮಗಳ ರಚನಾತ್ಮಕವಾದ ಹಾಗೂ ಸಾಮಾಜಿಕ ಜವಬ್ದಾರಿ ಅವಿಸ್ಮರಣೀಯ. ಮಾಧ್ಯಮ ರಂಗ ಇಂದು ಪ್ರಾಮಾಣಿಕವಾಗಿ ತನ್ನ ಕೆಲಸ ಮಾಡಿದರೆ ಸಮಾಜದ ಬದಲಾವಣೆ ಸಾಧ್ಯವಿದೆ. ಶಾಸಕಾಂಗ, ಕಾರ್ಯಾಂಗ ಒಂದಷ್ಟು ಏರು ಪೇರುಗಳಿಂದ ಕೂಡಿದ್ದು ಮಾಧ್ಯಮ ರಂಗ ಆಶಾಕಿರಣವಾಗಿ ಉಳಿದಿದೆ. ರಾಜಕಾರಣಿ ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸುವ ಹೊಣೆಗಾರಿಕೆಯ ಪ್ರಾಮುಖ್ಯತೆ ಪತ್ರಿಕೆಗಳದ್ದಾಗಿದೆ. ಅಭಿಪ್ರಾಯ ಮೂಡಿಸುವಷ್ಟರಮಟ್ಟಿಗೆ ಮುದ್ರಣ ಮಾಧ್ಯಮ ಅಂತಃಪ್ರಜ್ಞೆ ಹಾಗೂ ಆತ್ಮಸಾಕ್ಷಿಗೆ ಬದ್ಧವಾಗಿದ್ದು, ದೃಶ್ಯ ಮಾಧ್ಯಮಗಳು ಮಾಲೀಕನ ಅಣತಿಯಂತೆ ಸಮಾಜದ ವ್ಯಾಧಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಶಶಿಧರ್ ವಿಷಾದಿಸಿದರು.
ಸಾಮಾಜಿಕ ಸನ್ನಿಯಂತಾಗಿರುವ ಇಂದಿನ ದಿನಗಳಲ್ಲಿ ಸಮಾಜವನ್ನು ಆರೋಗ್ಯಕಾರಿಯಾಗಿ ನಿರ್ಮಾಣ ಮಾಡಬೇಕಿರುವುದು ಇಂದು ಅತ್ಯಗತ್ಯವಿದೆ.
ಸಿದ್ಧಾಂತ, ಆತ್ಮಸಾಕ್ಷಿಗೆ ಬದ್ಧರಾಗುವ ಮಾಧ್ಯಮ ಇಂದು ಬೇಕಿದೆ ಹೊರತು ಭೂಗತ ಪಾತಕಿಗಳನ್ನು ವೈಭವೀಕರಿಸುವ ದೃಶ್ಯ ಮಾಧ್ಯಮಗಳಲ್ಲ ಎಂದರು.
ಕೊಡಗು ವಿಶ್ವವಿದ್ಯಾಲಯಕ್ಕೆ ಶಾಸಕರ ವಿವೇಚನಾ ನಿಧಿಯಿಂದ ಪೂರಕವಾದ ಗರಿಷ್ಠ ಅನುದಾನವನ್ನು ಕೊಡಬೇಕು ಎಂದು ಇದೇ ಸಂದರ್ಭ ಮನವಿ ಮಾಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವ ಮೂಲಕ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಮಾತನಾಡಿ,
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಕ್ಕಿಂತಲೂ ಪತ್ರಿಕಾ ರಂಗ ಪ್ರಮುಖವಾದುದು. ಇಂದು ಮೌಲ್ಯಾಧಾರಿತ ಪತ್ರಿಕೋದ್ಯಮ ಈ ನಾಡಿಗೆ ಹೆಚ್ಚು ಅವಶ್ಯವಾಗಿದೆ. ಸಾಮಾಜಿಕ ಸ್ವಾಸ್ಥ್ಯ ಕಾಯ್ದುಕೊಳ್ಳುವಲ್ಲಿ ಪತ್ರಿಕಾ ರಂಗದ ಕೊಡುಗೆ ಅಪಾರ.
ಸಾಮಾಜಿಕ ಜಾಲತಾಣಗಳ ಬಳಕೆ ಅಗತ್ಯಕ್ಕಷ್ಟೇ ಬಳಸಬೇಕು. ಆದರೆ ಯಾವುದೇ ವ್ಯಕ್ತಿಯ ಬಗ್ಗೆ ಟೀಕೆಗೆ ಪೂರಕವಾದ ಮಾಹಿತಿ ನಮ್ಮಲ್ಲಿರಬೇಕು.
ಮಾಧ್ಯಮದ ವರದಿಗಳು ಸಮಾಜದ ಮೇಲೆ ಅಗಾಧವಾದ ಪ್ರಭಾವ ಬೀರುವಂತಿರಬೇಕು. ವೈಜ್ಞಾನಿಕ ಅನ್ವೇಷಣೆಗಳು, ಹೊಸ ಚಿಂತನೆಗಳತ್ತ, ಸಂಶೋಧನೆಗಳಾಗಬೇಕಿದೆ. ಮೌಢ್ಯಗಳು ಹಾಗೂ ಕಂದಾಚಾರಗಳ ನಿರ್ಮೂಲನೆ ಪತ್ರಿಕಾ ರಂಗದಿಂದ ಮಾತ್ರ ಸಾಧ್ಯ ಎಂದು ಕುಲಪತಿಗಳು ಆಶಿಸಿದರು.
ಇದೇ ಸಂದರ್ಭ ವಿವಿ ಕಳೆದ ಎರಡೂವರೆ ವರ್ಷಗಳಲ್ಲಿ ಸಾಧಿಸುತ್ತಿರುವ ಪ್ರಗತಿ ಹಾಗೂ ಜವಬ್ದಾರಿಗಳ ಕುರಿತು ಇದೇ ಸಂದರ್ಭ ಮಾಹಿತಿ ನೀಡಿದರು.
ಕೊಡಗು ವಿವಿ ಕುಲಸಚಿವ ಎಂ.ಸುರೇಶ್, ಕೊಡಗು ವಿವಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಇದ್ದರು. ಉಪನ್ಯಾಸಕ ಡಾ.ಜಮೀರ್ ಅಹಮದ್ ನಿರೂಪಿಸಿ, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಸ್ವಾಗತಿಸಿದರು. ಕೆ.ಎಸ್.ಮೂರ್ತಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.