
ಮಡಿಕೇರಿ ಜು.24 NEWS DESK : ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಜುಲೈ, 25 ರಂದು ಕೊಡಗಿಗೆ ಭೇಟಿ ನೀಡಲಿದ್ದಾರೆ. ಸಚಿವರು ಜುಲೈ, 25 ರಂದು ಬೆಳಗ್ಗೆ 11.30 ಗಂಟೆಗೆ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ. ತಿರ್ಲಾಪುರ ಅವರು ತಿಳಿಸಿದ್ದಾರೆ.









