
ಮಡಿಕೇರಿ ಜು.25 NEWS DESK : ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಮಾಹಿತಿ ಪಡೆದರು. ಈ ಸಂದರ್ಭ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು.








