ಮಡಿಕೇರಿ ಜು.25 NEWS DESK : ಸೆಪ್ಟೆಂಬರ್ 1 ರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರನ್ನು ಆಹ್ವಾನಿಸಲಾಯಿತು.











