
ಮಡಿಕೇರಿ NEWS DESK ಜು.25 : ದೇವರಕೊಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ.










