Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ : ಕಂದಾಯ ಸಚಿವ ಕೃಷ್ಣ ಬೈರೇಗೌಡ*
ಇತ್ತೀಚಿನ ಸುದ್ದಿಗಳು

*ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ : ಕಂದಾಯ ಸಚಿವ ಕೃಷ್ಣ ಬೈರೇಗೌಡ*

July 25, 20253 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜು.25 NEWS DESK : ‘ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕು ಘೋಷಣೆಯಾಗಿ 7 ವರ್ಷ ಕಳೆದಿದೆ. ಆ ದಿಸೆಯಲ್ಲಿ ಸರ್ಕಾರ ಪ್ರಜಾಸೌಧ ಹೆಸರಿನಲ್ಲಿ ಎರಡು ಆಡಳಿತ ಸೌಧ ನಿರ್ಮಾಣಕ್ಕೆ ತಲಾ 8.65 ಕೋಟಿ ರೂ.ವನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆಯೂ ಸಹ ಆಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.’ ಕೊಡಗು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ ಪೊನ್ನಂಪೇಟೆಯ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ಮಾತನಾಡಿದರು. ಸರ್ಕಾರ ಭೂಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಲ್ಪಿಸುತ್ತಿರುವ ಹಿನ್ನೆಲೆ ತಹಶೀಲ್ದಾರರ ಕಚೇರಿಯಲ್ಲಿ ಯಾವ ರೀತಿ ಅಪ್‍ಡೇಟ್ ಮಾಡಿದ್ದಾರೆ ಎಂಬ ಬಗ್ಗೆ ಸಚಿವರು ಮಾಹಿತಿ ಪಡೆದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ತಂದಿದ್ದು, ಅವುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಕಂದಾಯ ಸಚಿವರು ಸೂಚಿಸಿದರು. ಭೂದಾಖಲೆ ಸಂರಕ್ಷಣೆ ಸಂಬಂಧ ಹೊಸ ಹೊಸ ವಿಧಾನಕ್ಕೆ ಹೊಂದಿಕೊಂಡು ಸಾರ್ವಜನಿಕರಿಗೆ ಸಕಾಲದಲ್ಲಿ ನಾಗರಿಕ ಸೇವೆ ಒದಗಿಸಬೇಕು ಎಂದು ಕೃಷ್ಣಬೈರೇಗೌಡ ಅವರು ಕಟ್ಟುನಿಟ್ಟಾಗಿ ಸೂಚಿಸಿದರು. ಹೊಸ ಹೊಸ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಸೇವೆಗಳನ್ನು ತ್ವರಿತವಾಗಿ ಕಲ್ಪಿಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಸಿಬ್ಬಂದಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು. ಬಳಿಕ ತಾಲ್ಲೂಕು ಪ್ರಜಾಸೌಧ (ತಾಲ್ಲೂಕು ಆಡಳಿತ) ನಿರ್ಮಾಣದ ಜಾಗವನ್ನು ಸಚಿವರು ವೀಕ್ಷಿಸಿದರು. ನಂತರ ಬಲ್ಯಮಂಡೂರು ಬಳಿ ಸೇತುವೆ ವೀಕ್ಷಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಾಲ್ಲೂಕು ಕಚೇರಿಯಲ್ಲಿ ಭೂಮಾಲೀಕರ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಂರಕ್ಷಣೆ ಮಾಡುವಲ್ಲಿ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಭೂಮಿಗೆ ಸಂಬಂಧಿಸಿದಂತೆ ಭೂದಾಖಲೆಗಳು ಕಳೆದು ಹೋಗದಂತೆ ತಡೆಯುವುದು ಪ್ರಮುಖ ಉದ್ದೇಶವಾಗಿದೆ. ಭೂ ದಾಖಲೆಗಳು ಕಾಣದಿರುವುದು ಅಥವಾ ತಿದ್ದುಪಡಿ ಮಾಡುವುದು ಮತ್ತಿತರ ಗೊಂದಲಗಳಿಗೆ ಆಸ್ಪದ ಆಗದಂತೆ ಭೂ ಮಾಲೀಕರಿಗೆ ದಾಖಲೆಯ ‘ಗ್ಯಾರಂಟಿ’ ನೀಡುವುದು ಭೂ ಸುರಕ್ಷತಾ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ವಿವರಿಸಿದರು. ಭೂಮಾಲೀಕರ ಬೆರಳ ತುದಿಯಲ್ಲಿ ಭೂ ದಾಖಲೆಗಳು ಸಿಗುವಂತಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಇದರಿಂದ ಕಳೆದು ಹೋಗುವ, ತಿದ್ದುವ ಅಥವಾ ಸೃಷ್ಟಿ ಮಾಡುವ ದಂಧೆಗೆ ಕಡಿವಾಣ ಬೀಳಲಿದೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದರು. ಭೂ ದಾಖಲೆಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 100 ಕೋಟಿಗೂ ಹೆಚ್ಚು ಪುಟಗಳನ್ನು ಸ್ಕ್ಯಾನ್ ಮಾಡಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಮೂವತ್ತಮೂರುವರೆ ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ಇದೇ ಸಂದರ್ಭದಲ್ಲಿ ನುಡಿದರು. ಭೂಮಾಲೀಕರು ಭೂಸುರಕ್ಷಾ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹತ್ತಿರದ ನಾಡಕಚೇರಿಗೆ ಹೋಗಿ ಅಲ್ಲಿಯೂ ಸಹ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದೊಂದು ಗ್ಯಾರಂಟಿ ನೀಡುವ ಯೋಜನೆಯಾಗಿದೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಮಣ್ಣು, ಗುಡ್ಡ ಕುಸಿಯುವುದನ್ನು ತಡೆಯುವ ನಿಟ್ಟಿನಲ್ಲಿ ತಡೆಗೋಡೆ ನಿರ್ಮಾಣಕ್ಕೆ 50 ಕೋಟಿ ರೂ.ವನ್ನು ಮಂಜೂರು ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಅವರು ತಿಳಿಸಿದ್ದು, ಶೀಘ್ರ 50 ಕೋಟಿ ರೂ. ಹಣ ಬಿಡುಗಡೆ ಮಾಡಲಾಗುವುದು ಎಂದು ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮುಖ್ಯಮಂತ್ರಿ ಅವರು ಪ್ರಾಕೃತಿಕ ವಿಕೋಪದಡಿ ಜಿಲ್ಲಾಧಿಕಾರಿಯವರ ಪಿಡಿ ಖಾತೆಗೆ ಹಣ ಮಂಜೂರು ಮಾಡಲಿದ್ದಾರೆ. ಈ ಸಂಬಂಧ ಮಳೆಹಾನಿ ಪ್ರದೇಶ ವೀಕ್ಷಣೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಕೊಡಗು ಜಿಲ್ಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪಟ್ಟೆದಾರರು ತಮ್ಮ ಭೂಮಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಹಕ್ಕುದಾರಿಕೆ ಒದಗಿಸಲಾಗುವುದು. 30-40 ವರ್ಷದ ಹಳೆಯದನ್ನು ಸರಿಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಸಚಿವರು ಹೇಳಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಳೆ ಹಾನಿ ಪ್ರದೇಶ, ತಾಲ್ಲೂಕು ಆಡಳಿತ ಭವನ ನಿರ್ಮಾಣದ ಜಾಗ, ಬಲ್ಯ ಮಂಡೂರು ಬಳಿ ಸೇತುವೆ ಮತ್ತಿತ್ತರ ಬಗ್ಗೆ ಹಲವು ಮಾಹಿತಿ ನೀಡಿದರು. ಬಳಿಕ ಬಲ್ಯಮಂಡೂರು ಗ್ರಾ.ಪಂ.ಯಲ್ಲಿನ ಸಕಾಲ ಯೋಜನಾ ಕೇಂದ್ರಕ್ಕೆ ಸಚಿವರು ಭೇಟಿ ನೀಡಿ ಸಾರ್ವಜನಿಕರ ಸೇವೆ ಒದಗಿಸುತ್ತಿರುವ ಸಂಬಂಧ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೂ ದಾಖಲೆಗಳ ಸಂರಕ್ಷಣೆ, ಸಕಾಲ ಯೋಜನೆ ಸೇರಿದಂತೆ ಹಲವು ಕಂದಾಯ ವಿಚಾರಗಳ ಕುರಿತು ಸಚಿವರಿಗೆ ಮಾಹಿತಿ ಒದಗಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶೀಲ್ದಾರ್ ಮೋಹನ್ ಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿ.ಪಂ.ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

 

 

Share. Facebook Twitter Pinterest LinkedIn Tumblr Email WhatsApp
Previous Article*ಜು.26 ರಂದು ವಿರಾಜಪೇಟೆಯಲ್ಲಿ ವಿದ್ಯುತ್ ವ್ಯತ್ಯಯ*
Next Article *ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ* 

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.