
ಮಡಿಕೇರಿ ಜು.26 NEWS DESK : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಪೂರ್ವಭಾವಿಯಾಗಿ ಸಂಪ್ರದಾಯದAತೆ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಆ ಮೂಲಕ ದಸರಾ ಜನೋತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಮಡಿಕೇರಿ ದಸರಾ ಉತ್ಸವವನ್ನು ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಗೊಳಿಸುವಂತೆ ಸಮಿತಿಯ ಪ್ರಮುಖರು ಪ್ರಾರ್ಥಿಸಿದರು. ದಸರಾ ಸಮಿತಿಯ ನೂತನ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ದಸರಾ ಹಬ್ಬದ ಆಚರಣೆಗೆ ಎಲ್ಲರ ಸಹಕಾರದ ಅಗತ್ಯವಿದ್ದು, ಒಗ್ಗಟ್ಟನಿಂದ ಅದ್ದೂರಿಯಾಗಿ ಆಚರಿಸೋಣವೆಂದು ಮನವಿ ಮಾಡಿದರು. ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರಾದ ನಗರಸಭೆಯ ಅಧ್ಯಕ್ಷೆ ಪಿ.ಕಲಾವತಿ, ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ದಶ ಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್, ಸಮಿತಿಯ ಪ್ರಮುಖರಾದ ಜಿ.ಎಂ.ಸತೀಶ್ ಪೈ, ಕಾನೆಹಿತ್ಲು ಮೊಣ್ಣಪ್ಪ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಮಾಜಿ ಪದಾಧಿಕಾರಿಗಳು ಉಪಸ್ಥಿತರಿದ್ದರು.









